ಹಾಲಿ ಸಂಸದ ಡಿ.ವಿ.ಸದಾನಂದಗೌಡಗೆ ಬಿಜೆಪಿ ಟಿಕೆಟ್ ಮಿಸ್?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಾಲಿ ಸಂಸದ, ಮಾಜಿ ಸಿಎಂ ಡಿ.ವಿ.ಸದಾನಂದ ಗೌಡರಿಗೆ ಬಿಜೆಪಿ ಲೋಕಸಭಾ ಟಿಕೆಟ್ ಕೈತಪ್ಪಿದೆ .

ಈಗಾಗಲೇ ಡಿ.ವಿ. ಸದಾನಂದ ಗೌಡ ಅವರಿಗೆ ಕಾಲ್‌ ಮಾಡಿ ಹೈಕಮಾಂಡ್‌ ಮಾಹಿತಿ ನೀಡಿದೆ ಎನ್ನಲಾಗಿದೆ. ಈ ನಡುವೆ ಈ ಬಗ್ಗೆ ಅವರು ಟ್ವಿಟರ್‌ನಲ್ಲಿ ಮಾಹಿತಿಯನ್ನು ನೀಡಿದ್ದಾರೆ.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ಗಾಗಿ ಈಬಾರಿಯೂ ಸದಾನಂದಗೌಡ ತೀವ್ರ ಕಸರತ್ತು ನಡೆಸಿದ್ದರು. ಆದರೆ ಕೊನೇಕ್ಷಣದಲ್ಲಿ ಅಭ್ಯರ್ಥಿ ಬದಲಾವಣೆ ಮಾಡುವುದಾಗಿ ಬಿಜೆಪಿ ವರಿಷ್ಠರು ಸಂದೇಶ ರವಾನಿಸುವ ಮೂಲಕ ಹಾಲಿ ಸಂಸದರಿಗೆ ಶಾಕ್ ನೀಡಿದ್ದಾರೆ.

ಹೈಕಮಾಂಡ್ ಮಾಹಿತಿ ಬೆನ್ನಲ್ಲೇ ಮಾಜಿ ಸಿಎಂ ಡಿ.ವಿ.ಸದಾನಂದಗೌಡ, ಬೆಗಳೂರು ಉತ್ತರ ಕ್ಷೇತ್ರದ ಮತದಾರರಿಗೆ ಧನ್ಯವಾದ. ಶಕ್ತಿ ಮೀರಿ ನಿಮ್ಮ ಸೇವೆ ಮಾಡುವ ಪ್ರಯತ್ನ ಮಾಡಿದ್ದೇನೆ ಎಂದು ಟ್ವೀಟ್ ಮೂಲಕ ವಿದಯದ ಸಂದೇಶ ಬರೆದಿದ್ದಾರೆ.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ನನ್ನೆಲ್ಲಾ ಪ್ರೀತಿಯ ಬಂಧುಗಳೇ,
ನನಗೆ ಕಳೆದ ಹತ್ತು ವರ್ಷಗಳ ಕಾಲ ಈ ಕ್ಷೇತ್ರದ ಲೋಕಸಭಾ ಸದಸ್ಯನಾಗಿ, ನಿಮ್ಮ ಕೆಲಸ ಮಾಡುವ ಅವಕಾಶವನ್ನು ಮಾಡಿಕೊಟ್ಟು ಆಶೀರ್ವಾದವನ್ನು ಮಾಡಿದ್ದೀರಿ. ನಾನು ನನ್ನ ಶಕ್ತಿಮೀರಿ ನಿಮ್ಮ ಸೇವೆಯನ್ನು ಮಾಡುವ ಪ್ರಯತ್ನವನ್ನು ಮಾಡಿದ್ದೇನೆ. ನಿಮ್ಮ ಆಶೀರ್ವಾದದಿಂದ ಕೇಂದ್ರದಲ್ಲಿ ನಮ್ಮೆಲ್ಲರ ಪ್ರೀತಿಯ ಪ್ರಧಾನ ಮಂತ್ರಿ
ಶ್ರೀ ನರೇಂದ್ರ ಮೋದಿ ಅವರ ಜೊತೆಯಲ್ಲಿ 7 ವರ್ಷಗಳ ಕಾಲ ಕ್ಯಾಬಿನೆಟ್ ಮಂತ್ರಿಯಾಗಿ ಕೆಲಸ ಮಾಡುವ ಅವಕಾಶವನ್ನು ಕೂಡ ಕಲ್ಪಿಸಿದ್ದೀರಿ. ನಾನು ನಿಮ್ಮೆಲ್ಲರಿಗೂ ಚಿರಋಣಿ. ನಿಮ್ಮ ಜೊತೆಗೆ ಇನ್ನು ಮುಂದೆಯೂ ಇರುತ್ತೇನೆ. ಎಲ್ಲರಿಗೂ ನನ್ನ ಅಂತರಾಳದ ಹೃದಯ ತುಂಬಿದ ಧನ್ಯವಾದಗಳು ಎಂದು ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!