Monday, August 8, 2022

Latest Posts

ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡ 2019 ‘ಮಿಸ್ ಇಂಡಿಯಾ ದೆಹಲಿ’ ಮಾನ್ಸಿ ಸೆಹಗಲ್

ಹೊಸದಿಗಂತ ಆನ್ ಲೈನ್ ಡೆಸ್ಕ್:

2019ರಲ್ಲಿ ‘ಮಿಸ್ ಇಂಡಿಯಾ ದೆಹಲಿ’ ಆಗಿ ಆಯ್ಕೆಗೊಂಡಿದ್ದ ಮಾನ್ಸಿ ಸೆಹಗಲ್ ರಾಜಕೀಯ ಅಂಗಳಕ್ಕಿಳಿದಿದ್ದು, ಇಂದು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಪಕ್ಷದ ಮುಖಂಡ ರಾಘವ್ ಚಾಧಾ ಸಮ್ಮುಖದಲ್ಲಿ ಮಾನ್ಸಿ, ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಪಕ್ಷ ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ಆರು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯಲು ಸಿದ್ಧತೆ ನಡೆಸುತ್ತಿದ್ದು, ಉತ್ತರ ಪ್ರದೇಶ,ಉತ್ತರಾಖಂಡ, ಗೋವಾ, ಪಂಜಾಬ್, ಹಿಮಾಚಲ ಪ್ರದೇಶ ಮತ್ತು ಗುಜರಾತ್ನಲ್ಲಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss