ಮಿಸ್ ಪುದುಚೆರಿ ಖ್ಯಾತಿಯ ಮಾಡೆಲ್ ಸ್ಯಾನ್ ರೆಚಲ್ ಆತ್ಮಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮಿಸ್ ಪುದುಚೆರಿ ಖ್ಯಾತಿಯ ಮಾಡೆಲ್, ಸೋಶಿಯಲ್ ಮೀಡಿಯಾ ಸ್ಟಾರ್ ಸ್ಯಾನ್ ರೆಚಲ್ ಪುದುಚೆರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

26 ವರ್ಷದ ಸ್ಯಾನ್ ರೆಚಲ್ ತನ್ನ ತಂದೆಯ ಮನೆಗೆ ಭೇಟಿ ನೀಡಿದಾಗ ಹೆಚ್ಚಿನ ಸಂಖ್ಯೆಯಲ್ಲಿ ಮಾತ್ರೆಗಳನ್ನು ಸೇವಿಸಿದ್ದರು. ಮೊದಲಿಗೆ ಅವರನ್ನು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ನಂತರ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.

Famous model Black Beauty Queen San Rachel from Pondicherry commits suicide  in her residence ಆದರೆ ಚಿಕಿತ್ಸೆ ಫಲಕಾರಿಯಾಗದೇ ಸ್ಯಾನ್ ರೆಚಲ್ ಸಾವನ್ನಪ್ಪಿದ್ದಾರೆ. ಆರ್ಥಿಕ ಒತ್ತಡ ಮತ್ತು ವೈಯಕ್ತಿಕ ಒತ್ತಡ ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಆತ್ಮಹತ್ಯೆಗೂ ಮುನ್ನ ಸ್ಯಾನ್ ರೆಚಲ್ ಡೆತ್ ನೋಟ್‌ನಲ್ಲಿ ಆಕೆಯ ಸಾವಿಗೆ ಯಾರೂ ಕಾರಣರಲ್ಲ ಎಂದು ಬರೆದಿದ್ದಾರೆ. ಸದ್ಯ ಡೆತ್ ನೋಟ್ ವಶಪಡಿಸಿಕೊಂಡ ಪೊಲೀಸರು ಆಕೆಯ ವೈವಾಹಿಕ ಜೀವನದ ಬಗ್ಗೆಯೂ ತನಿಖೆ ಮಾಡುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!