ಹಣ ದುರ್ಬಳಕೆ: ಮೇಧಾಪಾಟ್ಕರ್‌ ಸಹಿತ 11 ಮಂದಿಯ ವಿರುದ್ಧ ಎಫ್‌ಐಆರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಸಂಗ್ರಹಿತ ನಿಧಿಯನ್ನು ದುರ್ಬಳಕೆ ಮಾಡಿಕೊಂಡ ಆರೋಪದ ಅಡಿಯಲ್ಲಿ ನರ್ಮದಾ ಬಚಾವೋ ಆಂದೋಲನದ ನಾಯಕಿ ಮೇಧಾ ಪಾಟ್ಕರ್ ಮತ್ತು ಇತರ 11 ಜನರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಅವರು ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯಲ್ಲಿ ಬುಡಕಟ್ಟು ವಿದ್ಯಾರ್ಥಿಗಳ ಶೈಕ್ಷಣಿಕ ಸೌಲಭ್ಯಗಳ ನಿರ್ವಹಣೆಗಾಗಿ ಸಂಗ್ರಹಿಸಿದ ಹಣವನ್ನು “ರಾಜಕೀಯ ಮತ್ತು ದೇಶ ವಿರೋಧಿ ಕಾರ್ಯಸೂಚಿಗೆ” ತಿರುಗಿಸುವ ಮೂಲಕ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಗ್ರಾಮಸ್ಥರು ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ಖಾಸಗಿ ದೂರಿನ ಮೇರೆಗೆ ಮೇಧಾ ಪಾಟ್ಕರ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಾಗಿದ್ದು, ದೂರುದಾರರು ಕೆಲವು ದಾಖಲೆಗಳನ್ನು ಒದಗಿಸಿದ್ದಾರೆ ಎಂದು ಬರ್ವಾನಿ ಪೊಲೀಸ್ ವರಿಷ್ಠಾಧಿಕಾರಿ ದೀಪಕ್ ಕುಮಾರ್ ಶುಕ್ಲಾ ಪಿಟಿಐಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ. ಮುಂಬೈನಲ್ಲಿ ನೋಂದಣಿಯಾಗಿರುವ ನರ್ಮದಾ ನವನಿರ್ಮಾಣ ಅಭಿಯಾನ (ಎನ್‌ಎನ್‌ಎ) ಟ್ರಸ್ಟ್, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದ ನರ್ಮದಾ ಕಣಿವೆಯ ಬುಡಕಟ್ಟು ವಿದ್ಯಾರ್ಥಿಗಳಿಗೆ ವಸತಿ ಶೈಕ್ಷಣಿಕ ಸೌಲಭ್ಯಗಳನ್ನು ನಡೆಸಲು ಸಂಗ್ರಹಿಸಿದ ಹಣವನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ.

ಆದರೆ ಮೇಧಾಪಾಟ್ಕರ್‌ ಅವರು ತಮ್ಮ ವಿರುದ್ಧದ ಆರೋಪಗಳನ್ನು ತಳ್ಳಿಹಾಕಿದ್ದು ಅವರಬಳಿ ಸಂಪೂರ್ಣ ಖಾತೆ ಮತ್ತು ವೆಚ್ಚಗಳ ಲೆಕ್ಕಪರಿಶೋಧನೆ ಇದ್ದು, ಈ ಆರೋಪಗಳ ಹಿಂದೆ ರಾಜಕೀಯ ಕಾರಣಗಳಿವೆ ಎಂದು ಹೇಳಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!