ಕೈ ತಪ್ಪಿದ ಬಿಜೆಪಿ ಟಿಕೆಟ್: ಸಚಿವ ಆನಂದ್ ಸಿಂಗ್ ಸಹೋದರಿ ಕಾಂಗ್ರೆಸ್ ಸೇರ್ಪಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಚುನಾವಣಾ ಅಖಾಡ ಕ್ಷಣ ಕ್ಷಣಕ್ಕೂ ಕದನ ಕೌತುಕಕ್ಕೆ ಸಾಕ್ಷಿಯಾಗಿದ್ದು, ಸಚಿವ ಆನಂದ್ ಸಿಂಗ್ ಸಹೋದರಿ ರಾಣಿ ಸಂಯುಕ್ತಾ ಸಿಂಗ್ ಬಿಜೆಪಿಗೆ ರಾಜೀನಾಮೆ ನೀಡಿ, ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

ರಾಣಿ ಸಂಯುಕ್ತಾ ರಾಜ್ಯ ಬಿಜೆಪಿ ಮಹಿಳಾ ಘಟಕದ ಉಪಾಧ್ಯಕ್ಷೆ ಕೂಡ ಆಗಿದ್ದರು.ಹೊಸಕೋಟೆ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಬಿಜೆಪಿ ಟಿಕೆಟ್ ವಂಚನೆಯಾಗಿದ್ದ ಹಿನ್ನೆಲೆಯಲ್ಲಿ ಪಕ್ಷದ ವಿರುದ್ಧ ಅಸಮಾಧನಗೊಂಡು ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ.

ಕಾಂಗ್ರೆಸ್ ಸೇರ್ಪಡೆ ನಿಟ್ಟಿನಲ್ಲಿ ನಿನ್ನೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಇಂದು ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ರಾಣಿ ಸಂಯುಕ್ತಾ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!