ಕೈ ತಪ್ಪಿದ ಬಿಜೆಪಿ ಟಿಕೆಟ್: ನನ್ನ ನಿರ್ಧಾರ ನಾಳೆ ತಿಳಿಸುತ್ತೇನೆಂದ ಶಾಸಕ ರಾಮದಾಸ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಚುನಾವಣೆಗೆ ಬಿಜೆಪಿ (BJP) ಮೂರನೇ ಪಟ್ಟಿ ಬಿಡುಗಡೆಯಾಗಿದ್ದು, ಮೈಸೂರಿನ ಕೃಷ್ಣರಾಜ ಕ್ಷೇತ್ರದಲ್ಲಿ ಹಾಲಿ ಶಾಸಕ ಎಸ್​ಎ ರಾಮದಾಸ್​ಗೆ (SA Ramdas) ಟಿಕೆಟ್ ಕೈತಪ್ಪಿದೆ. ಇದೀಗ​​ ಅಸಮಾಧಾನಕ್ಕೆ ಕಾರಣವಾಗಿದ್ದು, 30 ವರ್ಷದಿಂದ ಇದ್ದ ತಾಯಿ ಮನೆಯಿಂದ ಓಡಿಸಿದ್ದಾರೆ. ಈಗ ಆ ಮನೆಯಲ್ಲಿ ಇರಬೇಕಾ ಬೇಡವಾ ಎಂಬ ಬಗ್ಗೆ ಯೋಚಿಸಬೇಕಾಗಿದೆ ಎಂದು ಹೇಳಿದ್ದಾರೆ. ಆ ಮೂಲಕ ಬಿಜೆಪಿಯಲ್ಲಿ ಮತ್ತೆ ಬಂಡಾಯದ ಬಿಸಿ ಮುಟ್ಟಿಸುವ ಸುಳಿವು ನೀಡಿದ್ದಾರೆ.

ಮೈಸೂರಿನ ನಿವಾಸದಲ್ಲಿ ಮಾತನಾಡಿದ ಅವರು, ಪಕ್ಷದಲ್ಲಿರಬೇಕೇ ಅಥವಾ ಬೇರೆ ಯಾವ ನಿರ್ಧಾರ ಕೈಗೊಳ್ಳಬೇಕು ಎಂಬುದಾಗಿ ನಾಳೆ ತಿಳಿಸುತ್ತೇನೆ, ನಾನು ಯಾರನ್ನೂ ಭೇಟಿ ಮಾಡುವುದಿಲ್ಲ ಎಂದು ಅವರು ಹೇಳಿದ್ದಾರೆ.

ಈ ಮಧ್ಯೆ, ಪಕ್ಷದ ಟಿಕೆಟ್ ಪಡೆದಿರುವ ಶ್ರೀವತ್ಸ, ಸಂಸದ ಪ್ರತಾಪ್​ ಸಿಂಹ ಹಾಗೂ ಬಿಜೆಪಿ ಉಪಾಧ್ಯಕ್ಷ ರಾಜೇಂದ್ರ ಅವರು ರಾಮದಾಸ್​ ನಿವಾಸಕ್ಕೆ ಭೇಟಿ ನೀಡಿದ್ದಾರೆ.

ಇದೀಗ ಎಸ್​ಎ ರಾಮದಾಸ್​ ಏನು ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದನ್ನು ಮಂಗಳವಾರ ಸಂಜೆವರೆಗೂ ಕಾದು ನೋಡಬೇಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!