ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಹಗರಣದ ಕುರಿತು ಚರ್ಚೆಗೆ ಅವಕಾಶ ನೀಡದ ಕಾರಣ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ವಿಧಾನಸಭೆಯೊಳಗೆ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.
ವಿಧಾನಸಭೆ ಹಾಗೂ ವಿಧಾನಪರಿಷತ್ನಲ್ಲಿ ವಿಪಕ್ಷ ನಾಯಕರು ಜಂಟಿಯಾಗಿ ಅಹೋರಾತ್ರಿ ಧರಣಿ ಕುಳಿತ್ತಿದ್ದು, ಕಾಂಗ್ರೆಸ್ ವಿರುದ್ಧ ಧಿಕ್ಕಾರ ಕೂಗುತ್ತಾ ರಾಮನ ಭಜನೆ ಮಾಡಿದರು.
ಇನ್ನು ಬಿಜೆಪಿ-ಜೆಡಿಎಸ್ ಸದಸ್ಯರಿಂದ ಅಹೋರಾತ್ರಿ ಧರಣಿ ಕುಳಿತಿರುವ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ವಿಧಾನಸಭೆಯಲ್ಲಿ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಭೇಟಿ ನೀಡಿ ಶಾಸಕರಿಗೆ ರಾತ್ರಿ ಊಟದ ವ್ಯವಸ್ಥೆ ಬಗ್ಗೆ ವಿಚಾರಿಸಿದರು. ಆದ್ರೆ, ಸರ್ಕಾರದ ಊಟವನ್ನು ನಿರಾಕರಿಸಿದ್ದು, ಹಗರಣದ ಹಣದಿಂದ ನಮಗೆ ಊಟದ ವ್ಯವಸ್ಥೆ ಬೇಡ. ರಾತ್ರಿಯ ಊಟ, ಹಾಸಿಗೆ ವ್ಯವಸ್ಥೆ ತಾವೇ ಮಾಡಿಕೊಂಡಿಕೊಳ್ಳುವುದಾಗಿ ಹೇಳಿದರು.
ಈ ಬಗ್ಗೆ ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯಿಸಿದ್ದು, ಮೂಡಾ ಹಗರಣದ ಬಗ್ಗೆ ಸದನದಲ್ಲಿ ಚರ್ಚೆಗೆ ಕೇಳಿದಿದ್ವಿ. ಆದ್ರೆ, ಸ್ಪೀಕರ್ ಚರ್ಚೆಗೆ ಅವಕಾಶ ಕೊಟ್ಟಿಲ್ಲ. ಅದ್ದರಿಂದಾಗಿ ಸರ್ಕಾರದ ವಿರುದ್ದವಾಗಿ ಅಹೊರಾತ್ರಿ ಪ್ರತಿಭಟನೆ ಮಾಡುತ್ತಿದ್ದೇವೆ. ಸ್ಪೀಕರ್ ಬಂದು ಊಟ ವ್ಯವಸ್ಥೆ ಮಾಡುತ್ತೇವೆ ಎಂದು ಹೇಳಿದ್ರು. ದಲಿತರ ನಿಗಮದಲ್ಲಿ ಲೂಟಿ ಹೊಡೆದ ಹಣದಿಂದ ನಮಗೆ ಯಾವುದು ಬೇಡ ಎಂದು ತಿರಸ್ಕರಿಸಿದ್ದೇವೆ. ಲೂಟಿ ಹೊಡೆದಿರುವ ಹಣದಿಂದ ನಮಗೆ ಯಾವುದೆ ಸೌಲಭ್ಯ ಬೇಡ. ಅವರ ಹಣಕ್ಕಾಗಿ ನಾವು ಹೋರಾಟ ಮಾಡ್ತಿದ್ದೇವೆ ಎಂದು ಹೇಳಿದರು.