ಹೊಸದಿಗಂತ ವರದಿ ಪುತ್ತೂರು:
ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಸಿಗದ ವಿಚಾರದಲ್ಲಿ ಖಿನ್ನತೆಗೊಳಗಾಗಿ ವಿದ್ಯಾರ್ಥಿನಿಯೊಬ್ಬಳು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದ.ಕ. ಜಿಲ್ಲೆಯ ಪುತ್ತೂರಿನ ಸಂಪ್ಯದಲ್ಲಿ ನಡೆದಿದೆ. ನಿಶಾ(17) ಮೃತಪಟ್ಟ ವಿದ್ಯಾರ್ಥಿನಿ.
ಕಳೆದ ಎರಡು ವಾರಗಳ ಹಿಂದೆ ಬಿಹಾರದಲ್ಲಿ ನಡೆದಿದ್ದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ನಿಶಾ ರನ್ನಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.ಬಆದರೆ ಈ ರನ್ನಿಂಗ್ ರೇಸ್ ನಲ್ಲಿ ಬಹುಮಾನ ಸಿಗದಿದ್ದಕ್ಕೆ ಬೇಸರಗೊಂಡಿದ್ದ ನಿಶಾ ಬಳಿಕ ಖಿನ್ನತೆಗೊಳಗಾಗಿ ತೋಟಕ್ಕೆ ಸಿಂಪಡಿಸುವ ಕೀಟನಾಶವನ್ನ ಸೇವಿಸಿದ್ದರು ಎನ್ಮಲಾಗಿದೆ.
ತೀವ್ರ ವಾಂತಿ ಕಾಣಿಸಿಕೊಂಡ ಕಾರಣಕ್ಕೆ ಮನೆಯವರು ವಿಚಾರಿಸಿದಾಗ ಕೀಟನಾಶಕ ಸೇವಿಸಿದ ವಿಚಾರ ಬೆಳಕಿಗೆ ಬಂದಿತ್ತು. ಅದಾಗಿ ಕೂಡಲೇ ಆಕೆಯನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನಿಂದ ಮಂಗಳೂರಿಗೆ ಕೊಂಡೊಯ್ಯುವಂತೆ ವೈದ್ಯರು ತಿಳಿಸಿದ್ದರು.
ಕಳೆದ ಒಂದುವಾರದಿಂದ ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಿಶಾ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ