October 15, 2026
Thursday, October 15, 2026
spot_img

ಇರಾನ್‌ನ ಬುಶೆಹರ್ ಪರಮಾಣು ಸ್ಥಾವರದ ಮೇಲೆ ಕ್ಷಿಪಣಿ ದಾಳಿ: ಓರ್ವ ಸಿಬ್ಬಂದಿ ಸಾವು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ದಿನೇ ದಿನೇ ಹೆಚ್ಚುತ್ತಲ್ಲೇ ಇದ್ದು, ಇರಾನ್‌ನ ಬುಶೆಹರ್ ಪರಮಾಣು ಸ್ಥಾವರದ ಮೇಲೆ ಅಮೆರಿಕ-ಇಸ್ರೇಲ್ ಕ್ಷಿಪಣಿ ದಾಳಿ ನಡೆಸಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.

ಇತ್ತ ದಾಳಿ ಬೆನ್ನಲ್ಲೇ ಅಂತಾರಾಷ್ಟ್ರೀಯ ಪರಮಾಣು ಇಂಧನ ಸಂಸ್ಥೆ ಇರಾನ್‌ನಿಂದ ಮಾಹಿತಿ ಪಡೆದಿದ್ದು ,ಸ್ಥಾವರದ ಮುಖ್ಯ ಭಾಗಗಳಿಗೆ ಹಾನಿಯಾಗಿಲ್ಲ , ಹೀಗಾಗಿ ಯಾವುದೇ ರೀತಿಯ ವಿಕಿರಣ ಸೋರಿಕೆಯಾಗಿಲ್ಲ ಎಂದು ತಿಳಿಸಿದೆ.

ಇಲ್ಲಿನ ಭೌತಿಕ ರಕ್ಷಣಾ ಸಿಬ್ಬಂದಿಗಳಲ್ಲಿ ಒಬ್ಬರು ದಾಳಿಗೆ ಸಾವನ್ನಪ್ಪಿದ್ದಾರೆ ಮತ್ತು ಆದರೆ ಹತ್ತಿರದ ಕಟ್ಟಡಕ್ಕೆ ಹಾನಿಯಾಗಿದೆ ಎಂದು ಇಂಧನ ಸಂಸ್ಥೆ ಮಾಹಿತಿ ನೀಡಿದೆ.

ಡೊನಾಲ್ಡ್ ಟ್ರಂಪ್ ಇತ್ತೀಚೆಗೆ ಮೂಲಸೌಕರ್ಯಗಳ ಮೇಲೆ ಸಂಭಾವ್ಯ ದಾಳಿಗಳನ್ನು ನಡೆಸುವುದಾಗಿ ಇರಾನ್‌ಗೆ ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ಭೀಕರ ದಾಳಿ ನಡೆದಿದೆ.

Must Read