ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಪತ್ತೆಯಾಗಿದ್ದ, ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ಎಂದು ಬೆಂಗಳೂರಿನಲ್ಲಿ ಜಾರಿ ನಿರ್ದೇಶನಾಲಯದ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.
ಕಳೆದ ಅಕ್ಟೋಬರ್ 28ರಂದು ಇಡಿ ಅಧಿಕಾರಿಗಳು ಮುಡಾ ಮಾಜಿ ಅಧ್ಯಕ್ಷ ದಿನೇಶ್ ಕುಮಾರ್ ನಿವಾಸದ ಮೇಲೆ ದಾಳಿ ಮಾಡಿದರು. ಈ ವೇಳೆ ದಿನೇಶ್ ಕುಮಾರ್ ವಾಕಿಂಗ್ ಹೋಗುವ ಸ್ಥಳದಿಂದಲೇ ನಾಪತ್ತೆಯಾಗಿದ್ದರು.
ದಿನೇಶ್ ಕುಮಾರ್ ನಾಪತ್ತೆ ಆಗಿರುವ ವಿಚಾರ ತಿಳಿದು ಇಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗದೆ ಹೋದರೆ ವಾರಂಟ್ ಜಾರಿ ಮಾಡಿ ವಶಕ್ಕೆ ಪಡೆದುಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೋಟಿಸ್ ನೀಡಿದ್ದರು.
ಇದೀಗ ದಿನೇಶ್ ಕುಮಾರ್ ಬೆಂಗಳೂರಿನ ಶಾಂತಿನಗರದಲ್ಲಿರುವ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.