ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಪತ್ತೆಯಾಗಿದ್ದ ರಷ್ಯಾದ Mi-8T ಹೆಲಿಕಾಪ್ಟರ್ ಕಮ್ಚಟ್ಕಾದ ಪೂರ್ವ ಪರ್ಯಾಯ ದ್ವೀಪದ ಬಳಿ ಪತ್ತೆಯಾಗಿದ್ದು, ಹೆಲಿಕಾಪ್ಟರ್‌ನಲ್ಲಿದ್ದ 22 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
22 ಜನರನ್ನು ಹೊತ್ತ ರಷ್ಯಾದ Mi-8T ಹೆಲಿಕಾಪ್ಟರ್ ಶನಿವಾರ ವಚ್ಕಜೆಟ್ಸ್ ವಾಲ್ಕೆನೊ ಎಂಬಲ್ಲಿಂದ ಹೊರಟು ನಾಪತ್ತೆಯಾಗಿತ್ತು. ಇದಾದ ಒಂದು ದಿನಗಳ ಬಳಿಕ ಕಮ್ಚಟ್ಕಾದ ಪೂರ್ವ ಪರ್ಯಾಯ ದ್ವೀಪದಲ್ಲಿ ಪತನಗೊಂಡಿರುವುದು ಗೊತ್ತಾಗಿದೆ. ಅದಕ್ಕೆ ಪುರಕವಾಗಿ ಹೆಲಿಕಾಪ್ಟರ್‌ನ ಅವಶೇಷಗಳು ಸಿಕ್ಕಿವೆ. ಆದರೆ ಹೆಲಿಕಾಪ್ಟರ್‌ನಲ್ಲಿದ್ದ 22 ಮಂದಿಯೂ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆಯೊಂದು ಭಾನುವಾರ ತಿಳಿಸಿದೆ.