ಆಗಸ್ಟ್ 2022ಕ್ಕೆ ಮಿಷನ್ ಚಂದ್ರಯಾನ-3

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹೊಸದಿಲ್ಲಿ: ಚಂದ್ರಯಾನ – 2 ಉಡಾವಣೆಗೊಂಡು ಮೂರು ವರ್ಷಗಳ ನಂತರ ಭಾರತ ಚಂದ್ರಯಾನ – 3 ಯೋಜನೆಗೆ ಸಜ್ಜುಗೊಳ್ಳುತ್ತಿದೆ. ಈ ವರ್ಷ ಆಗಸ್ಟ್‌ನಲ್ಲಿ ಚಂದ್ರಯಾನ – 3 ಅನ್ನು ಉಡಾವಣೆ ಮಾಡಲು ನಿರ್ಧರಿಸಲಾಗಿದೆ.

ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಭೂವಿಜ್ಞಾನ ರಾಜ್ಯ ಸಚಿವ (ಸ್ವತಂತ್ರ ಉಸ್ತುವಾರಿ), ಅಣುಶಕ್ತಿ ಮತ್ತು ಬಾಹ್ಯಾಕಾಶ ಸಚಿವ ಡಾ. ಜಿತೇಂದ್ರ ಸಿಂಗ್ ಅವರು ಲೋಕಸಭೆಯಲ್ಲಿ ಈ ಮಾಹಿತಿ ನೀಡಿದ್ದಾರೆ.

ಚಂದ್ರಯಾನ-2ರಿಂದ ಕಲಿತುಕೊಂಡಿರುವ ಮತ್ತು ರಾಷ್ಟ್ರೀಯ ಮಟ್ಟದ ತಜ್ಞರು ನೀಡಿದ ಸಲಹೆಗಳ ಆಧಾರದ ಮೇಲೆ ಚಂದ್ರಯಾನ-3 ಯೋಜನೆಯ ಅನುಷ್ಠಾನ ಪ್ರಗತಿಯಲ್ಲಿದೆ. ಇದಕ್ಕೆ ಸಂಬಂಧಿತ ಹಲವು ಹಾರ್ಡ್‌ವೇರ್ ಮತ್ತು ಅವುಗಳ ವಿಶೇಷ ಪರೀಕ್ಷೆಗಳು ಯಶಸ್ವಿಯಾಗಿ ಪೂರ್ಣಗೊಂಡಿವೆ. ಈ ಹಿನ್ನೆಲೆಯಲ್ಲಿ ಉಡಾವಣೆಯನ್ನು ಆಗಸ್ಟ್ 2022ಕ್ಕೆ ನಿಗದಿಪಡಿಸಲಾಗಿದೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!