ಟಿಕೆಟ್, ಪಾರ್ಕಿಂಗ್​ನಲ್ಲಿ ಅವ್ಯವಹಾರ: ಮೈಸೂರು ಅರಮನೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೈಸೂರು ಅರಮನೆ ಮಂಡಳಿ ಕಚೇರಿ ಮೇಲೆ ಇಂದು (ಮೇ 23) ಲೋಕಾಯುಕ್ತ ದಾಳಿ ನಡೆದಿದೆ. ಇಲ್ಲಿಯವರೆಗೆ ಪ್ರವೇಶ ದ್ವಾರ ಮತ್ತು ಪಾರ್ಕಿಂಗ್ ಪ್ರದೇಶದಲ್ಲಿ ಲೆಕ್ಕಕ್ಕೆ ಸಿಗದ 4.10 ಲಕ್ಷ ರೂಪಾಯಿ ನಗದು ಪತ್ತೆಯಾಗಿದ್ದು, ವಶಪಡಿಸಿಕೊಳ್ಳಲಾಗಿದೆ.

ಟಿಕೆಟ್ ಮತ್ತು ಪಾರ್ಕಿಂಗ್ ಹಗರಣಗಳು ಸಾಮಾನ್ಯವಾಗಿವೆ ಎಂಬ ದೂರು ಇತ್ತು. ಈ ದೂರಿನ ಆಧಾರದ ಮೇಲೆ ಲೋಕಾಯುಕ್ತ ಎಸ್.ಪಿ. ಸಚಿತ್ ಕಾರ್ಯಾಚರಣೆ ನಡೆಸಿ ಅಕ್ರಮ ಹಣ ವಶಪಡಿಸಿಕೊಂಡಿದ್ದಾರೆ.

ಮೈಸೂರು, ಚಾಮರಾಜನಗರ, ಮಂಡ್ಯ, ಮಡಿಕೇರಿ ಲೋಕಾಯುಕ್ತ ಡಿವೈಎಸ್ಪಿ ನೌಕರರು, ಅಧಿಕಾರಿಗಳು, ಕಾರ್ಯಕರ್ತರು ಕೂಡ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!