ಹೊಸ ದಿಗಂತ ಡಿಜಿಟಲ್ ಡೆಸ್ಕ್:
ನನ್ನ ಹೆಸರು ದುರ್ಬಳಕೆ ಮಾಡಿಕೊಳ್ಳುವುದನ್ನು ಕಾಂಗ್ರೆಸ್ ಅಭ್ಯರ್ಥಿ ಸಿದ್ದೇಗೌಡ ಅವರು ನಿಲ್ಲಿಸಬೇಕು. ಒಕ್ಕಲಿಗರು ಸಿದ್ದೇಗೌಡ ಮಾತಿಗೆ ಕಿವಿಗೊಡಬೇಡಿ. ಸುಳ್ಳು ಹೇಳಿಕೊಂಡು ಓಡಾಡುತ್ತಿರುವವರನ್ನು ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ ಎಂದು ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಲಿಂಗಾಯತ ಸಿಎಂ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮುಖ್ಯಮಂತ್ರಿ ಸಮುದಾಯದ ಪ್ರತಿನಿಧಿ ಅಲ್ಲ, ನಾಡಿನ ಪ್ರತಿನಿಧಿ. ಸಿಎಂ ಹುದ್ದೆಯನ್ನು ಜಾತಿಗೆ ಸೀಮಿತ ಮಾಡಬೇಡಿ. ಸಂದರ್ಭಕ್ಕೆ ಅನುಗುಣವಾಗಿ ರಾಜಕೀಯ ಪಕ್ಷಗಳು ನಾಯಕರನ್ನು ಆಯ್ಕೆ ಮಾಡುತ್ತವೆ. ಆದರೆ ನಾಡಿನ ಹಿತದೃಷ್ಟಿ ಇಟ್ಟುಕೊಂಡು ಸಿಎಂ ಕೆಲಸ ಮಾಡಬೇಕು ಎಂದರು.