ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್‌ನ ಓವರ್ ಸೀಸ್ ಯೂನಿಟ್ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ಬೆಂಗಳೂರಿನ ಯಲಹಂಕದಲ್ಲಿ 12.35 ಎಕರೆ ಮೀಸಲು ಅರಣ್ಯ ಭೂಮಿಯನ್ನು ಅಕ್ರಮವಾಗಿ ವಶಪಡಿಸಿಕೊಂಡಿದ್ದಾರೆ ಎಂದು ಕರ್ನಾಟಕದ ಬಿಜೆಪಿ ನಾಯಕ ಎನ್.ಆರ್. ರಮೇಶ್ ದೂರು ದಾಖಲಿಸಿದ್ದಾರೆ.
ವೈದ್ಯಕೀಯ ಸಂಶೋಧನೆಗಾಗಿ ಗುತ್ತಿಗೆ ಪಡೆದ ಭೂಮಿಯನ್ನ ಪಿತ್ರೋಡಾ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ರಮೇಶ್ ಇಡಿ ಮತ್ತು ಕರ್ನಾಟಕ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ರಮೇಶ್ ಅವರ ದೂರಿನ ಪ್ರಕಾರ, ಮೀಸಲು ಅರಣ್ಯ ಭೂಮಿಯನ್ನು ಗುತ್ತಿಗೆ ಪಡೆದುಕೊಂಡಿದ್ದರು, 2011 ರಲ್ಲಿ ಗುತ್ತಿಗೆಯ ಅವಧಿ ಪೂರ್ಣಗೊಂಡಿದ್ದರು ಅದನ್ನ ನವೀಕರಿಸದೆ ಈ ಭೂಮಿಯಲ್ಲಿ ಫಾರ್ಮಸಿಟಿಕಲ್ ಆಕ್ಟಿವಿಟೀಸ್ ಗಾಗಿ ಬಳಸಿಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮತ್ತು ಹಾಲಿ ಐಎಎಸ್ ಮತ್ತು ಐಎಫ್‌ಎಸ್ ಅಧಿಕಾರಿಗಳಾದ ಜಾವೇದ್ ಅಖ್ತರ್, ಆರ್.ಕೆ. ಸಿಂಗ್, ಸಂಜಯ್ ಮೋಹನ್, ಎನ್.ರವೀಂದ್ರನ್ ಕುಮಾರ್ ಮತ್ತು ಎಸ್.ಎಸ್.ರವಿಶಂಕರ್ ಸೇರಿದಂತೆ ಐದು ಇತರ ಅಧಿಕಾರಿಗಳ ಹೆಸರನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ.