ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸರ್ಕಾರವು ಸಿಬಿಐ, ಇಡಿ , ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡುತ್ತಿದೆ ಎಂದು ವಿರೋಧ ಪಕ್ಷಗಳು ಸುಪ್ರೀಂ ಕೋರ್ಟ್ಗೆ ಅರ್ಜಿಯನ್ನು ಸಲ್ಲಿಸಿತ್ತು, ಆದರೆ ಕೋರ್ಟ್ ಅರ್ಜಿ ವಿಚಾರಣೆ ನಡೆಸಲು ನಿರಾಕರಿಸಿದೆ.
ಸರ್ಕಾರವು ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದೆ ಮತ್ತು ತನ್ನ ರಾಜಕೀಯ ವಿರೋಧಿಗಳಿಗೆ ಕಿರುಕುಳ ನೀಡಲು ಕೇಂದ್ರ ತನಿಖಾ ಸಂಸ್ಥೆಗಳನ್ನು ಬಳಸುತ್ತಿದೆ ಎಂದು ಆರೋಪಿಸಿ 14 ವಿರೋಧ ಪಕ್ಷಗಳ ಅರ್ಜಿ ಸಲ್ಲಿಸಿತ್ತು.
ವಿರೋಧ ಪಕ್ಷಗಳ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದಿಸಿದರು.