ಕಾಂಗ್ರೆಸ್ ಪರ ವಿಡಿಯೋ ದುರ್ಬಳಕೆ: ನಟ ಅಲ್ಲು ಅರ್ಜುನ್ ಕೊಟ್ರು ಸ್ಪಷ್ಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ತೆಲುಗಿನ ಖ್ಯಾತ ನಟ ಅಲ್ಲು ಅರ್ಜುನ್ (Allu Arjun) ಅವರ ವಿಡಿಯೋವೊಂದನ್ನು (Video) ಕಾಂಗ್ರೆಸ್ ಪಕ್ಷದ ಪರವಾಗಿ ದುರ್ಬಳಕೆ ಮಾಡಿಕೊಂಡಿದ್ದಕ್ಕೆ ಅಲ್ಲು ಅರ್ಜುನ್ ಗರಂ ಆಗಿದ್ದಾರೆ. ತಮ್ಮ ಈ ವಿಡಿಯೋವನ್ನು ಬಳಕೆ ಮಾಡಿಕೊಂಡಿದ್ದವರ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ.

ಅಲ್ಲು ಅರ್ಜುನ್ 2022ರಲ್ಲಿ ಅಮೆರಿಕಾದ ನ್ಯೂಯಾರ್ಕ್ ನಗರದಲ್ಲಿ ನಡೆದ ವಾರ್ಷಿಕ ಭಾರತೀಯ ದಿನದ ಪರೇಡ್ ನಲ್ಲಿ ಭಾಗಿಯಾಗಿದ್ದರು. ಅಲ್ಲಿ ರ‍್ಯಾಲಿ ನಡೆದಾಗ ಅದರಲ್ಲಿ ಪಾಲ್ಗೊಂಡಿದ್ದರು. ಆ ವಿಡಿಯೋವನ್ನು ಕಾಂಗ್ರೆಸ್ (Congress) ಪರ ಅಲ್ಲು ಪ್ರಚಾರ ಮಾಡುತ್ತಿದ್ದಾರೆ ಎಂದು ಚುನಾವಣೆ ಸಂದರ್ಭದಲ್ಲಿ ಬಳಕೆ ಆಗುತ್ತಿದೆ. ಈ ವಿಡಿಯೋವನ್ನು ಸಾಕಷ್ಟು ಜನರು ಶೇರ್ ಕೂಡ ಮಾಡಿದ್ದಾರೆ.ಹೆಚ್ಚೆಚ್ಚು ಶೇರ್ ಆಗುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ಅಲ್ಲು ಅರ್ಜುನ್, ಆ ವಿಡಿಯೋದ ನಿಜ ಸತ್ಯವನ್ನು ಹೇಳಿಕೊಂಡಿದ್ದಾರೆ. ತಾವು ಯಾವುದೇ ಪಕ್ಷದ ಪರವಾಗಿ ಪ್ರಚಾರ ಮಾಡಿಲ್ಲ ಎಂದು ಸ್ಪಷ್ಟನೆಯನ್ನೂ ನೀಡಿದ್ದಾರೆ.

ಈ ಹಿಂದೆ ಬಾಲಿವುಡ್ ನ ಆಮೀರ್ ಖಾನ್ ಮತ್ತು ರಣವೀರ್ ಸಿಂಗ್ ಅವರ ವಾಯ್ಸ್ ಅನ್ನು ಇದೇ ರೀತಿ ಬಳಕೆ ಮಾಡಿಕೊಳ್ಳಲಾಗಿತ್ತು. ದೂರು ಕೂಡ ದಾಖಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!