ಮಿಚೆಲ್-ವಿಲಿಯಮ್ಸನ್ ತಾಳ್ಮೆಯ ಬ್ಯಾಟಿಂಗ್: ಪಾಕ್‌ಗೆ 153 ರನ್ ಟಾರ್ಗೆಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಡೇರಲ್ ಮಿಚೆಲ್ ಹಾಗೂ ನಾಯಕ ಕೇನ್ ವಿಲಿಯಮ್ಸನ್ ತಾಳ್ಮೆಯ ಬ್ಯಾಟಿಂಗ್ ನೆರವಿನಿಂದ ನ್ಯೂಜಿಲೆಂಡ್ ತಂಡವು ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 152 ರನ್ ಗಳಿಸಿದೆ.

ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ನ್ಯೂಜಿಲೆಂಡ್ ತಂಡವು ಉತ್ತಮ ಆರಂಭ ಪಡೆಯಲು ವಿಫಲವಾಯಿತು. ಅಲೆನ್ ಕೇವಲ 4 ರನ್ ಬಾರಿಸಿ ಮೊದಲ ಓವರ್‌ನಲ್ಲೇ ಶಾಹೀನ್ ಅಫ್ರಿದಿಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿದರು. ಡೆವೊನ್ ಕಾನ್‌ವೇ 21 ರನ್ ಬಾರಿಸಿ ರನೌಟ್ ಆಗುವ ಮೂಲಕ ಪೆವಿಲಿಯನ್ ಸೇರಿದರು. ಫಿಲಿಫ್ಸ್ ಕೇವಲ 6 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

8 ಓವರ್ ಅಂತ್ಯದ ವೇಳೆಗೆ ಕೇವಲ 49 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡು ಕಂಗಾಲಾಗಿದ್ದ ನ್ಯೂಜಿಲೆಂಡ್ ತಂಡಕ್ಕೆ ಕೇನ್ ವಿಲಿಯಮ್ಸನ್ ಹಾಗೂ ಡೇರಲ್ ಮಿಚೆಲ್ 66 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು.

ಕೇನ್ ವಿಲಿಯಮ್ಸನ್ 42 ಎಸೆತಗಳಲ್ಲಿ 1 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 46 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇನ್ನು ಮತ್ತೊಂದು ತುದಿಯಲ್ಲಿ ಸ್ಪೋಟಕ ಬ್ಯಾಟಿಂಗ್ ನಡೆಸಿದ ಡೇರಲ್ ಮಿಚೆಲ್ 35 ಎಸೆತಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 53 ರನ್ ಬಾರಿಸಿ ಅಜೇಯರಾಗುಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!