ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ನಿವೃತ್ತಿ ಘೋಷಿಸಿದ ಮಿಥಾಲಿ ರಾಜ್

ಹೊಸದಿಗಂತ ಡಿಜಿಟಲ್ ಡೆಸ್ಕ್‌
ಟೀಮ್‌ ಇಂಡಿಯಾ ಮಹಿಳಾ ಏಕದಿನ ಮತ್ತು ಟೆಸ್ಟ್ ತಂಡದ ನಾಯಕಿ ಮಿಥಾಲಿ ರಾಜ್ ಬುಧವಾರ ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ನಿವೃತ್ತಿ ಘೋಷಿಸಿದ್ದಾರೆ.
ಟೀಮ್‌ ಇಂಡಿಯಾವನ್ನು ಸುಮಾರು 23 ವರ್ಷಗಳ ಕಾಲ ಪ್ರತಿನಿಧಿಸಿದ್ದ ಮಿತಾಲಿ ಹಲವಾರು ವಿಶ್ವದಾಖಲೆಗಳನ್ನು ಬರೆದಿದ್ದಾರೆ. ವನಿತೆಯರ ಏಕದಿನ ಮಾದರಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿಯಾಗಿ ಮಿಥಾಲಿ ನಿವೃತ್ತಿಯಾಗುತ್ತಿದ್ದಾರೆ. ಜೂನ್ 26, 1999 ರಂದು ಮಿಲ್ಟನ್ ಕೇನ್ಸ್‌ನಲ್ಲಿ ಐರ್ಲೆಂಡ್ ವಿರುದ್ಧ ಪಾದಾರ್ಪಣೆ ಮಾಡಿದ ಬಳಿಕ ಅವರು 232 ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ. 50.68 ರ ಸರಾಸರಿಯಲ್ಲಿ 7805 ರನ್ ಕಲೆಹಾಕಿದ್ದಾರೆ. ದೇಶಕ್ಕಾಗಿ 12 ಟೆಸ್ಟ್ ಮತ್ತು 89 T20 ಗಳನ್ನು ಆಡಿದ್ದು, ಕ್ರಮವಾಗಿ 699 ಮತ್ತು 2364 ರನ್ ಗಳಿಸಿದ್ದಾರೆ.

“ಇಷ್ಟು ವರ್ಷಗಳಿಂದ ನಿಮ್ಮೆಲ್ಲರ ಪ್ರೀತಿ ಮತ್ತು ಬೆಂಬಲಕ್ಕಾಗಿ ಧನ್ಯವಾದಗಳು. ನಿಮ್ಮ ಆಶೀರ್ವಾದ ಮತ್ತು ಬೆಂಬಲದೊಂದಿಗೆ ನನ್ನ 2ನೇ ಇನ್ನಿಂಗ್ಸ್‌ಗಾಗಿ ಎದುರು ನೋಡುತ್ತಿದ್ದೇನೆ ಎಂದು ಮಿಥಾಲಿ ಟ್ವಿಟ್‌ ಮಾಡಿದ್ದಾರೆ. ಸಾರ್ವಕಾಲಿಕ ಶ್ರೇಷ್ಠ ಮಹಿಳಾ ಆಟಗಾರ್ತಿಯರಲ್ಲಿ ಒಬ್ಬರೆಂದು ಗುರುತಿಸಿಕೊಂಡಿರುವ 39ರ ಹರೆಯದ ಮಿಥಾಲಿ, ಭಾರತ ತಂಡದ ನಾಯಕಿಯಾಗಿ ತನಗೆ ನೀಡಿದ ಬೆಂಬಲಕ್ಕಾಗಿ ಬಿಸಿಸಿಐಗೆ  ಹೃತ್ಪೂರ್ವಕ ಧನ್ಯವಾದ ಅರ್ಪಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!