Wednesday, February 28, 2024

ಮಿಥುನ್ ಚಕ್ರವರ್ತಿ ಔಟ್ ಆಫ್ ಡೇಂಜರ್: ಇಷ್ಟಕ್ಕೂ ಈ ನಟಗೆ ಆಗಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ಫೆ. 10 ರಂದು ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನ ಕೋಲ್ಕತ್ತದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರ ಆರೋಗ್ಯದ ಬಗ್ಗೆ ವೈದ್ಯರು ಕೆಲವೊಂದು ಮಾಹಿತಿ ನೀಡಿದ್ದಾರೆ.

ವೈದ್ಯರ ಮಾಹಿತಿ ಪ್ರಕಾರ ಮಿಥುನ್ ಚಕ್ರವರ್ತಿ ಅವರಿಗೆ ಬ್ರೇನ್ ಸ್ಟ್ರೋಕ್ ಆಗಿದೆ ಎಂಬ ವಿಚಾರವನ್ನು ಈಗ ವೈದ್ಯರು ತಿಳಿಸಿದ್ದಾರೆ. ಅವರ ಆಪ್ತ ಮೂಲಗಳ ಪ್ರಕಾರ ಮಿಥುನ್ ಅವರು ಇದೀಗ ಐಸಿಯುನಿಂದ ಹೊರಬಂದಿದ್ದಾರೆ, ವಾರ್ಡ್ ಗೆ ಶಿಫ್ಟ್ ಮಾಡಲಾಗಿದ್ದು ಅವರ ಆರೋಗ್ಯ ಚೇತರಿಸಿಕೊಳ್ಳುತ್ತಿದೆ ಎಂದು ಹೇಳಿದ್ದಾರೆ.

ದೇಹದಲ್ಲಿ ಶುಗರ್ ಮಟ್ಟ ಕಡಿಮೆ ಆಗಿದೆ. ಅವರು ಆದಷ್ಟು ಬೇಗ ಚೇತರಿಸಿಕೊಳ್ಳುತ್ತಾರೆ ಅಭಿಮಾನಿಗಳು ನಿರಾಳವಾಗಿರಿ ಎಂದು ಅವರ ಆಪ್ತ ಮೂಲ ತಿಳಿಸಿದೆ.

 

 

 

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!