ಹೊಸದಿಗಂತ ಆನ್ಲೈನ್ ಡೆಸ್ಕ್:
ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ಅಧಿಕೃತವಾಗಿ ಬಿಜೆಪಿ ಸೇರಿದ್ದಾರೆ.
ಕಲ್ಕತ್ತದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ಬಿಜೆಪಿ ಬೃಹತ್ ಚುನಾವಣೆ ಸಮಾವೇಶವನ್ನು ಆಯೋಜಿಸಿದ್ದು, ಈ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿ ಮಾತನಾಡಲಿದ್ದಾರೆ. ಇದಕ್ಕೂ ಪೂರ್ವದಲ್ಲೇ ಮಿಥುನ್ ಚಕ್ರವರ್ತಿ ಅವರು ಬಿಜೆಪಿ ಸೇರಿದ್ದಾರೆ. ಅವರನ್ನು ಬಂಗಾಳ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಅವರು ಪಕ್ಷಕ್ಕೆ ಬರಮಾಡಿಕೊಂಡರು.
ನಿನ್ನೆ ಪಶ್ಚಿಮ ಬಂಗಾಳ ಬಿಜೆಪಿ ಮುಖಂಡ ಕೈಲಾಶ್ ವಿಜಯವರ್ಗೀಯ ಅವರು ಮಿಥುನ್ ಚಕ್ರವರ್ತಿ ಅವರ ಮನೆಗೆ ಭೇಟಿ ನೀಡಿದ್ದರು. ಸಮಾವೇಶದಲ್ಲಿ ಭಾರತ್ ಮಾತಾಕಿ ಕೈ ಹಾಗೂ ಜೈ ಶ್ರೀರಾಮ್ ಘೋಷಣೆಗಳು ಮೊಳಗಿದವು. ಮಿಥುನ್ ಅವರ ಆಗಮನದಿಂದ ಬಂಗಾಳ ಬಿಜೆಪಿಗೆ ಹಾಗೂ ಬಂಗಾಳಕ್ಕೆ ಶಕ್ತಿ ಬರಲಿದೆ ಎಂದು ಹೇಳಿದ್ದರು.
#WATCH Actor Mithun Chakraborty joins Bharatiya Janata Party at PM's rally in Kolkata#WestBengalElection2021 pic.twitter.com/MGzGH7sSaf
— ANI (@ANI) March 7, 2021