ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಹವಾಮಾನ ಎಲ್ಲ ರೀತಿಯೂ ಇದೆ, ಕೆಲ ಜಿಲ್ಲೆಗಳಲ್ಲಿ ಜೋರು ಮಳೆಯಾಗುತ್ತಿದ್ದರೆ, ಕೆಲವು ಜಿಲ್ಲೆಗಳಲ್ಲಿ ರಣಬಿಸಿಲಿದೆ. ಇನ್ನು ಕೆಲ ಜಿಲ್ಲೆಗಳಲ್ಲಿ ಒಣಹವೆ, ಬಿಸಿಲೂ ಕಮ್ಮಿ ಆದರೆ ಮಳೆಯೂ ಇಲ್ಲ ಎನ್ನುವಂತಾಗಿದೆ.
ರಾಜ್ಯದ ಜನರಿಗೆ ಹೀಟ್‌ವೇವ್‌ನಿಂದ ಜನರಿಗೆ ಮುಕ್ತಿ ಸಿಗಲಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಿಸಿಲು, ಒಣಹವೆ ಮತ್ತು ಮಳೆಯ ವಾತಾವರಣ ಮುಂದುವರಿಯಲಿದೆ. ಇದರೊಂದಿಗೆ ಕೆಲ ಜಿಲ್ಲೆಗಳಲ್ಲಿ ವರುಣನ ಆಗಮನವೂ ಆಗಲಿದೆ. ದಕ್ಷಿಣ ಒಳನಾಡು ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.