April 30, 2026
Thursday, April 30, 2026
spot_img

ಶಾಸಕ ಬಿ.ನಾಗೇಂದ್ರಗೆ ಬಂಧನದ ಭೀತಿ: ನಾಳೆಗೆ ಆದೇಶ ಕಾಯ್ದಿರಿಸಿದ ಕೋರ್ಟ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಹರ್ಷಿ ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಮಾಜಿ ಸಚಿವ, ಶಾಸಕರಾಗಿರುವ ನಾಗೇಂದ್ರಗೆ ಬಂಧನದ ಭೀತಿ ಎದುರಾಗಿದ್ದು, ಈ ಹಿನ್ನೆಲೆ ಬಿ ನಾಗೇಂದ್ರ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು .

ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿ ನಾಳೆಗೆ ಆದೇಶವನ್ನು ಕಾಯ್ದಿರಿಸಿ ಆದೇಶ ಹೊರಡಿಸಿದೆ.

ಈಗಾಗಲೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಬಿಐ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಜಾರಿ ನಿರ್ದೇಶನಾಲಯ ಕೂಡ ಮೇಲಿಂದ ಮೇಲೆ ವಿಚಾರಣೆ ನಡೆಸುತ್ತಿದೆ. ಹಾಗಾಗಿ ಬಿ ನಾಗೇಂದ್ರ ಕೋರ್ಟ್ ಮೊರೆ ಹೋಗಿದ್ದಾರೆ .

ಮತ್ತೊಮ್ಮೆ ಬಂಧನದ ಭೀತಿ ಹಿನ್ನೆಲೆ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೊರೆ ಹೋಗಿದ್ದು, ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಾಳೆಗೆ ಆದೇಶ ಕಾಯ್ದಿರಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !