ಶಾಸಕ ಬಿ ನಾಗೇಂದ್ರಗೆ ಮತ್ತೆ ಸಚಿವ ಸ್ಥಾನ? ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಾಲ್ಮೀಕಿ ಹಗರಣದಲ್ಲಿ ಕಾಂಗ್ರೆಸ್ ಶಾಸಕ ಬಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಜೈಲಿಗೆ ಹೋಗಿ ಬಂದಿದ್ದಾರೆ. ಇದೀಗ ಅವರಿಗೆ ಮತ್ತೆ ಸಚಿವ ಸ್ಥಾನ ಭಾಗ್ಯ ದೊರೆಯುವ ಸಾಧ್ಯತೆಗಳು ಇವೆ.

ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಾಗೇಂದ್ರಗೆ ಮತ್ತೆ ಸಚಿವ ಸ್ಥಾನ ನೀಡುವ ಮಾತುಗಳನ್ನಾಡಿದ್ದಾರೆ. ಜಾರಿ ನಿರ್ದೇಶನಾಲಯ (ಇ.ಡಿ) ವಾಲ್ಮೀಕಿ ಹಗರಣದ ತನಿಖೆಯನ್ನು ನಡೆಸಿದ್ದರೆ, ಇತ್ತ ಸಿಎಂ, ನಾಗೇಂದ್ರಗೆ ಮತ್ತೆ ಸಚಿವ ಸ್ಥಾನ ನೀಡುವ ಸುಳಿವು ಕೊಟ್ಟಿದ್ದಾರೆ.

ಮೈಸೂರು ಜಿಲ್ಲೆ H.D.ಕೋಟೆಯಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ವಾಲ್ಮೀಕಿ ನಿಗಮದಲ್ಲಿ ಕೆಲ ಹಣ ದುರುಪಯೋಗ ಆಗಿದೆ. ಆ ಪ್ರಕರಣದ ತನಿಖೆ ನಡೆಯುತ್ತಿದೆ. ಆದರೂ ನಿಗಮಕ್ಕೆ ಒಂದು ಪೈಸೆಯೂ ಕಡಿಮೆ ಮಾಡಲ್ಲ. ನನ್ನ ಬಳಿಯೇ ಈಗ ಆ ಖಾತೆ ಇದೆ, ಹಣ ಮೀಸಲಿಡುತ್ತೇನೆ. ಶಾಸಕ ಬಿ.ನಾಗೇಂದ್ರ ಮೇಲೂ ಸುಳ್ಳು ಕೇಸ್ ಹಾಕಿಸಿದ್ದಾರೆ. ನಾಗೇಂದ್ರಗೆ ಈಗ ಬೇಲ್ ಸಿಕ್ಕಿದೆ, ಹೊರಗಡೆ ಬಂದಿದ್ದಾರೆ. ಚುನಾವಣೆ ಆದ್ಮೇಲೆ ಒಂದು ತೀರ್ಮಾನ ಮಾಡಬೇಕಿದೆ ಎಂದು ಹೇಳುವ ಮೂಲಕ ನಾಗೇಂದ್ರಗೆ ಮತ್ತೆ ಸಚಿವ ಸ್ಥಾನ ನೀಡುವ ಸುಳಿವು ನೀಡಿದರು.

ಕಾರ್ಯಕ್ರಮದಲ್ಲಿ ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡುವಂತೆ ಅವರ ಬೆಂಬಲಿಗರು ಸಿಎಂ ಮುಂದೆ ಬೇಡಿಕೆ ಇಟ್ಟರು. ಆ ವೇಳೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿ ಸಚಿವ ಸ್ಥಾನ ಕೊಡಲು ಸಾಧ್ಯವಿಲ್ಲ. ಎಲ್ಲಿ ಖಾಲಿ ಇದೆ, ಕೊಡುತ್ತೇನೆ ಎಂದು ಸುಳ್ಳು ಹೇಳಲು ಆಗಲ್ಲ. ಈಗ ಹೇಳಿ ಆ ನಂತರ ಮಾತಿಗೆ ತಪ್ಪಲು ಆಗುತ್ತಾ? ನಾಗೇಂದ್ರ ಅವರಿಗೆ ಕೊಡಬೇಕು. ಕೊಡುತ್ತೇನೆ ಎಂದು ಸ್ಪಷ್ಟಪಡಿಸಿದರು.

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!