ಶಾಸಕ ಬಿ.ನಾಗೇಂದ್ರ ಸಚಿವರಾಗಿ ಪ್ರಮಾಣ ಸ್ವೀಕಾರ

ಹೊಸದಿಗಂತ ವರದಿ ಬಳ್ಳಾರಿ:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ನೂತನ ಸರ್ಕಾರದ ಸಂಪುಟ ದರ್ಜೆ ಸಚಿವರಾಗಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಶನಿವಾರ ಪ್ರಮಾಣ ಸ್ವೀಕರಿಸಿದರು. ಬೆಂಗಳೂರಿನ ಗಾಜಿನ ಮನೆಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಭೋದಿಸಿದರು.

ಸತತ ನಾಲ್ಕನೇ ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಸಚಿವ ವಿ.ನಾಗೇಂದ್ರ ಅವರು, ಕ್ಷೇತ್ರದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶ್ರೀ ಎರ್ರಿತಾತ, ಶ್ರೀ ಮಹರ್ಷಿ ವಾಲ್ಮೀಕಿ ಅವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಕೂಡ್ಲಗಿ ಕ್ಷೇತ್ರದಲ್ಲಿ ಪಕ್ಷೇತರರಾಗಿ, ಒಮ್ಮೆ ಬಿಜೆಪಿ ಶಾಸಕರಾಗಿ ಅಯ್ಕೆಯಾಗಿದ್ದರು. ಕಳೆದ 2018ರಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿ ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದರು.

2023ರಲ್ಲಿ ಮತ್ತೇ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿ ಪ್ರಭಾವಿ ಸಚಿವ ಬಿ.ಶ್ರೀರಾಮುಲು ಅವರ ವಿರುದ್ಧ ಅತಿ ಹೆಚ್ಚು ಮತಗಳ ಅಂತರಗಳಿಂದ ಆಯ್ಕೆಯಾಗಿದ್ದರು. ಸ್ಪಷ್ಟ ಬಹುಮತ ಪಡೆದ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ಸ್ವೀಕರಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!