ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ರೋಗಿಗಳಿಗೆ ಹಣ್ಣು ವಿತರಿಸಿದ ಶಾಸಕ!

ಹೊಸದಿಗಂತ ವರದಿ ಬೀದರ:

ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ನಿಮಿತ್ತ ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ಸೆಪ್ಟೆಂಬರ್ 17ರಂದು ಔರಾದ(ಬಿ) ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ವಿತರಿಸಿದರು.

ಈ ವೇಳೆ ವಿವಿಧ ವಾರ್ಡ್‌ಗಳಿಗೆ ತೆರಳಿ ರೋಗಿಗಳ ಆರೋಗ್ಯ ವಿಚಾರಿಸಿದರು. ಚಿಕಿತ್ಸೆ, ಔಷಧೋಪಚಾರದ ಕುರಿತು ಮಾಹಿತಿ ಪಡೆದರು. ಆಸ್ಪತ್ರೆಗೆ ದಾಖಲಾಗುವ ಎಲ್ಲ ರೋಗಿಗಳಿಗೆ ಉತ್ತಮ ಚಿಕಿತ್ಸೆ ಕಲ್ಪಿಸಬೇಕು. ಚಿಕಿತ್ಸೆಯ ಕುರಿತಂತೆ ಯಾವುದೇ ರೀತಿಯ ದೂರುಗಳು ಬಾರದ ರೀತಿಯಲ್ಲಿ ಕೆಲಸ ಮಾಡಬೇಕೆಂದು ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಔರಾದ ಮಂಡಲ ಅಧ್ಯಕ್ಷರಾದ ರಾಮಶೆಟ್ಟಿ ಪನ್ನಾಳೆ, ಎಪಿಎಂಸಿ ಅಧ್ಯಕ್ಷ ದೊಂಡಿಬಾ ನರೋಟೆ, ಮುಖಂಡರಾದ ಶಿವಾಜಿರಾವ ಪಾಟೀಲ ಮುಂಗನಾಳ, ಕೇರಬಾ ಪವಾರ್, ಸಂಜು ಒಡೆಯರ್, ಅಶೋಕ ಅಲ್ಮಾಜೆ, ಸಂದೀಪ ಪಾಟೀಲ, ಅಶೋಕ ಕೋಳಿ, ಶೀನಿವಾಸ ಖೂಬಾ ಹಾಗೂ ಇತರರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!