ಸಂಡೂರು ಶ್ರೀ ಕುಮಾರಸ್ವಾಮಿ ದೇಗುಲಕ್ಕೆ ಭೇಟಿ ನೀಡಿದ ಶಾಸಕ ಗಾಲಿ ಸೋಮಶೇಖರ್ ರೆಡ್ಡಿ

ಹೊಸದಿಗಂತ ವರದಿ,ಬಳ್ಳಾರಿ:

ನಗರ ಶಾಸಕ ಗಾಲಿ ಸೋಮಶೇಖರ್ ರೆಡ್ಡಿ ಅವರು, ಮಂಗಳವಾರ ಸಂಡೂರಿನ ಐತಿಹಾಸಿಕ ಸುಪ್ರಸಿದ್ಧ ಶ್ರೀ ಕುಮಾರಸ್ವಾಮಿ ದೇಗುಲಕ್ಕೆ ಕುಟುಂಬ ಸಮೇತ ತೆರಳಿ, ವಿಶೇಷ, ಪೂಜೆ, ಅರ್ಚನೆ ಸಲ್ಲಿಸಿದರು.
ಸಾರಿಗೆ ಸಚಿವ ಬಿ.ಶ್ರೀರಾಮುಲು ಅವರು ಯಾವುದೇ ಉನ್ನತ ಸ್ಥಾನ ಅಲಂಕರಿಸಿದರೂ ಶಾಸಕ ಗಾಲಿ ಸೋಮಶೇಖರ್ ರೆಡ್ಡಿ ಅವರು, ಸಂಡೂರಿನ ಶ್ರೀ ಕುಮಾರಸ್ವಾಮಿ ದೇಗುಲಕ್ಕೆ ತೆರಳಿ ವಿಶೇಷ ಪೂಜೆ, ಅರ್ಚನೆ ಸಲ್ಲಿಸಿಸುತ್ತಿದ್ದರು. ಸಚಿವ ಶ್ರೀರಾಮುಲು ಅವರು ಚಿತ್ರದುರ್ಗ ಜಿಲ್ಲೆಯ ಮೊಣಕಾಲ್ಮೂರ್ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರೂ, ತವರು ಜಿಲ್ಲೆ ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿರುವ ಹಿನ್ನೆಲೆ ಶ್ರೀ ಕ್ಷೇತ್ರಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಶಾಸಕ ಸೋಮಶೇಖರ್ ರೆಡ್ಡಿ ಅವರೂ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದಾರೆ, ಈ ಕುರಿತು ವಿಶೇಷ ಪೂಜೆ, ಅರ್ಚನೆ ಸಲ್ಲಿಸಿರಬಹುದು ಎನ್ನುವ ಚೆರ್ಚೆಗಳು ನಡೆದಿವೆ. ಸಚಿವ ಶ್ರೀರಾಮುಲು ಅವರ ಬಯಕೆಯಂತೆ ತವರು ಜಿಲ್ಲೆಯ ಉಸ್ತುವಾರಿ ದೊರೆತ ಹಿನ್ನೆಲೆ ಅವರ ಅಭಿಮಾನಿಗಳು ವೃದ್ದಾಶ್ರಮದಲ್ಲಿ ಸಿಹಿ ಊಟ ವಿತರಣೆ, ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕಾರ್ಕಲತೋಟ ಪಾಲನ್ನ, ಭಾಜಪ ಯುವ ಮುಖಂಡ‌ ಕೆ.ರಾಮಾಂಜಿನಿ, ಸಂಡೂರು ಭಾಜಪ ಮಂಡಲ ಅಧ್ಯಕ್ಷ ಜಿ
ಟಿ.ಪಂಪಾಪತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!