September 7, 2026
Monday, September 7, 2026
spot_img

ಖರ್ಗೆ ತೆರಳಿದ ಬಳಿಕ ರಾಮಲೀಲಾ ಮೈದಾನದ ಶುದ್ಧೀಕರಣ : ಅಸ್ಪೃಶ್ಯತೆ ಭಾವನೆ ಮೂಡಿಸುವ ಘಟನೆ ಎಂದ ಶಾಸಕ ಜೆ.ಟಿ.ಪಾಟೀಲ

ಹೊಸದಿಗಂತ ವರದಿ ಬಾಗಲಕೋಟೆ:

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಾಖಂಡದ ರಾಮಲೀಲಾ ಮೈದಾನದಲ್ಲಿ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ದೆಹಲಿಗೆ ಮರಳಿದ ಬಳಿಕ, ಅವರು ಭಾಗವಹಿಸಿದ್ದ ಸ್ಥಳವನ್ನು ಶುದ್ಧೀಕರಣ ಮಾಡಿರುವ ಘಟನೆ ಖಂಡನೀಯ. ದೇಶದಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ ಎಂಬ ಭಾವನೆ ಮೂಡಿಸುವಂತಹ ಕೃತ್ಯ ಇದಾಗಿದೆ ಎಂದು ಬೀಳಗಿ ಶಾಸಕ ಜೆ.ಟಿ.ಪಾಟೀಲ ಆರೋಪಿಸಿದರು.

ಬಾಗಲಕೋಟೆ ನವನಗರದ ಪತ್ರಿಕಾಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಾ.ಬಿ.ಆರ್.ಅಂಬೇಡ್ಕರ್ ಅವರು ಎಲ್ಲರೂ ಸಮಾನವಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂಬ ಉದ್ದೇಶ ಹೊಂದಿದ್ದರು. ಆದರೆ ಇಂದಿಗೂ ಜಾತಿ ಆಧಾರಿತ ಅಸ್ಪೃಶ್ಯತೆ ಮುಂದುವರಿದಿರುವುದು ನೋವಿನ ಸಂಗತಿ ಎಂದರು.

ಮಲ್ಲಿಕಾರ್ಜುನ ಖರ್ಗೆ ಅವರು ಜಾತಿಯ ಆಧಾರದ ಮೇಲೆ ಅಧಿಕಾರ ಪಡೆದವರಲ್ಲ. ಅವರ ಮೇಲೆ ಯಾವುದೇ ಕಪ್ಪು ಚುಕ್ಕೆ ಇಲ್ಲ. ಪಕ್ಷದ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿರುವ ಕಾರಣಕ್ಕೆ ಎಐಸಿಸಿ ಅಧ್ಯಕ್ಷರಾಗಿದ್ದಾರೆ. ಅಲ್ಲದೆ, ವಿರೋಧ ಪಕ್ಷದ ನಾಯಕರಾಗಿ ದೇಶದ ಪ್ರಮುಖ ವಿಚಾರಗಳನ್ನು ಸದನದಲ್ಲಿ ಮಂಡಿಸಿದ್ದಾರೆ. ಅಂತಹ ನಾಯಕನಿಗೆ ಅವಮಾನವಾಗುವ ರೀತಿಯಲ್ಲಿ ನಡೆದುಕೊಳ್ಳುವುದು ಸರಿಯಲ್ಲ ಎಂದು ಹೇಳಿದರು.

ಸ್ಥಳ ಶುದ್ಧೀಕರಣ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಕ್ರಮ ಕೈಗೊಳ್ಳದಿದ್ದರೆ ಇದೊಂದು ಪಿತೂರಿಯ ಭಾಗವೇ ಎಂಬ ಅನುಮಾನ ಮೂಡುತ್ತದೆ. ಯಾವುದೇ ಪಕ್ಷ ಅಥವಾ ಸಂಘಟನೆ ಇರಲಿ, ಅಸ್ಪೃಶ್ಯತೆಯನ್ನು ಹೋಗಲಾಡಿಸಲು ಎಲ್ಲರೂ ಮುಂದಾಗಬೇಕು. ಜನಾಂಗ-ಜನಾಂಗಗಳ ನಡುವೆ ದ್ವೇಷ ಉಂಟಾಗುವಂತಹ ಘಟನೆಗಳಿಗೆ ಅವಕಾಶ ನೀಡಬಾರದು ಎಂದರು.
ಮಹಾದೇವ ಹಾದಿಮನಿ ಮಾತನಾಡಿ, ದಲಿತ ಮುಖಂಡರೊಬ್ಬರು ಕಾರ್ಯಕ್ರಮದಲ್ಲಿ ಭಾಗವಹಿಸಿ ತೆರಳಿದ ಬಳಿಕ ಸ್ಥಳ ಶುದ್ಧೀಕರಣ ಮಾಡಿರುವುದು ಖಂಡನೀಯ. ಡಾ.ಅಂಬೇಡ್ಕರ್ ಆಶಯದಂತೆ ಎಲ್ಲ ವರ್ಗದವರು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಆದರೆ ಇಂತಹ ಘಟನೆಗಳು ಅಸ್ಪೃಶ್ಯತೆ ಇನ್ನೂ ಜೀವಂತವಾಗಿರುವುದನ್ನು ತೋರಿಸುತ್ತವೆ ಎಂದರು.

ರಾಹುಲ್ ಗಾಂಧಿ ಅವರ ವಿರುದ್ಧ ಎಫ್ ಐ ಆರ್ ಮಾಡುವ ಸರ್ಕಾರ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ದೀಕರಣ ಮಾಡಿದವರ ಮೇಲೆ ಇನ್ನೂ ಕ್ರಮ ಆಗದಿರುವುದು ಖಂಡನೀಯ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಆದರೆ ಸ್ಥಳ ಶುದ್ಧೀಕರಣ ಮಾಡಿದವರ ವಿರುದ್ಧ ಇದುವರೆಗೆ ಕ್ರಮ ಕೈಗೊಳ್ಳದಿರುವುದುಖಂಡನೀಯ. ಮೋಹನ್ ಭಾಗವತ್ ಅವರು ವಿದೇಶಗಳಲ್ಲಿ ಜಾತಿ ವ್ಯವಸ್ಥೆ ಕುರಿತು ಮಾತನಾಡುತ್ತಾರೆ. ಆದರೆ ಭಾರತದಲ್ಲಿ ಜಾತಿ ವ್ಯವಸ್ಥೆ ಇನ್ನೂ ಜೀವಂತವಾಗಿರುವ ಸಂದರ್ಭದಲ್ಲಿ ಉತ್ತರಾಖಂಡದ ಘಟನೆ ಕುರಿತು ಸ್ಪಷ್ಟವಾಗಿ ಖಂಡನೆ ವ್ಯಕ್ತಪಡಿಸಬೇಕಿತ್ತು. ಈ ಘಟನೆ ಖರ್ಗೆ ಅವರಿಗೆ ಮಾನಸಿಕವಾಗಿ ಆಘಾತ ಉಂಟುಮಾಡಿದೆ ಎಂದು ಹೇಳಿದರು.

ಕಾಂಗ್ರೆಸ್ ಮುಖಂಡ ಎಂ.ಬಿ.ಸೌದಾಗರ ಮಾತನಾಡಿ,
ಖರ್ಗೆ ಭಾಷಣ ಮಾಡಿ ಹೋದ ಸ್ಥಳ ಸ್ಚಚ್ಚ ಮಾಡಿರುವುದು ಖಂಡನೀಯ. ಆರ್‌ಎಸ್ ಎಸ್ ಹಾಗೂ ಬಿಜೆಪಿಯಲ್ಲಿರುವ ಎಸ್ಸಿ,ಎಸ್ಟಿ ಘಟಕದವರು ಹೊರಬಂದು ಸಾಮಾಜಿಕ ವ್ಯವಸ್ಥೆಯಲ್ಲಿ ಇರುವಂತಹ ಪಕ್ಷಕ್ಕೆ ಬನ್ನಿ ಎಂದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !