Monday, October 2, 2023

Latest Posts

BREAKING NEWS | ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ನಿರೀಕ್ಷಣಾ ಜಾಮೀನು ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಬೀಳುತ್ತಿದ್ದಂತೆ ಮಾಡಾಳ್ ವಿರೂಪಾಕ್ಷಪ್ಪ ನಾಪತ್ತೆಯಾಗಿದ್ದಾರೆ ಎನ್ನಲಾಗಿತ್ತು, ಇದೀಗವಿರೂಪಾಕ್ಷಪ್ಪ ಬಂಧನವಾಗಿದೆ.

ಹೈಕೋರ್ಟ್ ಏಕಸದಸ್ಯ ಪೀಠ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಅರ್ಜಿ ವಜಾ ಗೊಳಿಸಿ ಆದೇಶ ಹೊರಡಿಸಿದೆ.

ಮಾರ್ಚ್ 2ರಂದು ಶಾಸಕ ಮಾಡಾಳ್ ವಿರುಪಾಕ್ಷಪ್ಪ ಅವರ ಪುತ್ರ ಬೆಂಗಳೂರು ಜಲಮಂಡಳಿಯ ಚೀಫ್ ಅಕೌಂಟಿಂಗ್ ಆಫೀಸರ್ ಮಾಡಾಳ್ ಪ್ರಶಾಂತ್ ಅವರು 40 ಲಕ್ಷ ರೂ. ಹಣವನ್ನು ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದರು. ಮಾಡಾಳ್ ವಿರೂಪಾಕ್ಷಪ್ಪ ನಿವಾಸದಲ್ಲಿ ಕೋಟಿ ಕೋಟಿ ಹಣ ಹಾಗೂ ಚಿನ್ನಾಭರಣ ಪತ್ತೆಯಾಗಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!