ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಟೆಂಡರ್ಗಾಗಿ ಲಂಚ ಪಡೆದ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಜಾಮೀನು ಮಂಜೂರಾಗಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಐದು ಲಕ್ಷ ರೂಪಾಯಿ ಬಾಂಡ್, ಇಬ್ಬರಿಂದ ಶ್ಯೂರಿಟಿ ನೀಡಲು ಸೂಚಿಸಲಾಗಿದೆ.
ಜೊತೆಗೆ ಮೂರು ವಾರಕ್ಕೊಮ್ಮೆ ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾಗಾಬೇಕು, ಪಾಸ್ಪೋರ್ಟ್ಗಳನ್ನು ತನಿಖಾಧಿಕಾರಿಗಳಿಗೆ ನೀಡಬೇಕು ಎಂದು ಷರತ್ತುಬದ್ಧ ಜಾಮೀನು ವಿಧಿಸಲಾಗಿದೆ.