ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದ ಪ್ರಕರಣದಲ್ಲಿ ಹೈಕೋರ್ಟ್ ಜಾಮೀನು ನಿರಾಕರಿಸಿದ ಬಳಿಕ, ಲೋಕಾಯುಕ್ತ ಪೊಲೀಸರಿಂದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಲಾಗಿತ್ತು.ಇದೀಗ ಅವರನ್ನು ಐದು ದಿನಗಳ ಕಾಲ ಲೋಕಾಯುಕ್ತ ಪೊಲೀಸರ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.
ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಪ್ರಕರಣ ಸಂಬಂಧ ನ್ಯಾಯಮೂರ್ತಿ ಬಿ.ಜಯಂತ್ ಕುಮಾರ್ ವಿಚಾರಣೆ ನಡೆಸಿದರು. ನ್ಯಾಯಪೀಠದ ಮುಂದೆ ಲೋಕಾಯುಕ್ತ ಪೊಲೀಸರ ಪರ ವಕೀಲರು ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಕೋರಿದರು.
ಏಪ್ರಿಲ್ 1ರವರೆಗೆ ಐದು ದಿನ ಲೋಕಾಯುಕ್ತ ಪೊಲೀಸರಿಗೆ ಕಸ್ಟಡಿಗೆ ನೀಡಿ ಆದೇಶಿಸಿದೆ.