Monday, October 2, 2023

Latest Posts

ಶಾಸಕ ಮಾಡಾಳು ವಿರುಪಾಕ್ಷಪ್ಪ ಜಾಮೀನು ರದ್ದು: ಮತ್ತೆ ಶುರುವಾಗಿದೆ ಬಂಧನ ಭೀತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಡಾಳ್‌ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು (Anticipatory Bail) ಅರ್ಜಿ ವಜಾಗೊಂಡಿದೆ . ಇದರಿಂದ ಅವರ ಬಂಧನವಾಗುವ ಸಾಧ್ಯತೆ ಹೆಚ್ಚಿದೆ.

ಇಂದು ಹೈಕೋರ್ಟ್‌ (High Court) ವಿಚಾರಣೆಯ ವೇಳೆ ಲೋಕಾಯುಕ್ತ ಪರ ವಕೀಲರು ಜಾಮೀನು ಅರ್ಜಿಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಅಂತಿಮವಾಗಿ ಏಕಸದಸ್ಯ ಪೀಠ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ಕೆಎಸ್‌ಡಿಎಲ್ ಟೆಂಡರ್ (KSDL) ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮಾರ್ಚ್‌ 7 ರಂದು ಹೈಕೋರ್ಟ್‌ ಮಧ್ಯಂತರ ಜಾಮೀನು ಮಜೂರು ಮಾಡಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!