ಹೊಸದಿಗಂತ ವರದಿ ಬಾಗಲಕೋಟೆ:
ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಜಯದೇವ ಹೃದ್ರೋಗ ಘಟಕ ಪ್ರಾರಂಬಿಸಲು ಮುಂಬರುವ ಬಜೆಟ್ ನಲ್ಲಿ ಅನುದಾನ ಒದಗಿಸುವಂತೆ ಶಾಸಕ ಎಚ್. ವೈ. ಮೇಟಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ಅಧಿಕೃತ ನಿವಾಸ ಕಾವೇರಿಯಲ್ಲಿ ಸಿಎಂ ಅವರನ್ನು ಇಂದು ಮೇಟಿಯವರು ಭೇಟಿಯಾಗಿ ಮಾತುಕತೆ ನಡೆಸಿದರು.
200 ಎಕರೆ ಜಮೀನಿನಲ್ಲಿ ಮಾರುಕಟ್ಟೆ ಸಂಕೀರ್ಣ ನಿರ್ಮಿಸಲು 2000 ಕೋಟಿ ಅನುದಾನವನ್ನು ಬಜೆಟ್ ನಲ್ಲಿ ಕಾಯ್ದಿರಿಸಬೇಕೆಂದು ಮೇಟಿಯವರು ಮುಖ್ಯಮಂತ್ರಿಳಲ್ಲಿ ಮನವಿ ಮಾಡಿದರು. ಇದಕ್ಕೆ ಮುಖ್ಯಮಂತ್ರಿಗಳು ಸಕಾರಾತ್ಮಕ ಪ್ರತಿಕ್ರಿಯೆ ವ್ತಕ್ತಪಡಿಸಿದರು.ಮಾನ್ಯ ಮುಖ್ಯಮಂತ್ರಿಗಳ ಮಾದ್ಯಮ ಸಲಹೆಗಾರರಾದ ಕೆ.ವಿ.ಪ್ರಬಾಕರ
ಸಚಿವರಾದ ಬೈರತಿ ಸುರೇಶ ಯುವ ಮುಖಂಡರಾದ ಹೊಳಬಸು ಶೆಟ್ಟರ ಹಾಜರಿದ್ದರು.