Friday, January 9, 2026

ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೀದರ್‌ ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಇಂದು ನಡೆದ ಜಿಲ್ಲಾಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹುಮನಾಬಾದ್ ಕ್ಷೇತ್ರದ ಬಿಜೆಪಿ ಶಾಸಕ ಸಿದ್ಧಲಿಂಗಪ್ಪ ಪಾಟೀಳ್ ಹಾಗೂ ಕಾಂಗ್ರೆಸ್ ವಿಧಾನಪತಿಷತ್ ಸದಸ್ಯ ಭೀಮರಾವ್ ಪಾಟೀಲ್ ಪರಸ್ಪರ ಕೈ ಕೈ ಮಿಲಾಯಿಸಿ, ಅವಾಚ್ಯ ಶಬ್ಧಗಳಿಂದ ನಿಂದಿಸಿಕೊಂಡಿರುವ ಘಟನೆ ನಡೆದಿದೆ.

ಸಭೆ ನಡೆಯುತ್ತಿರುವ ವೇಳೆ ಮಾತನಾಡಿದ ಶಾಸಕ ಸಿದ್ದು ಪಾಟೀಲ್, ಹುಮ್ನಾಬಾದ್​​ನಲ್ಲಿ ಅರಣ್ಯ ಜಾಗ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಸಚಿವ ಈಶ್ವರ್​ ಖಂಡ್ರೆಗೆ ಹೇಳಿದ್ದಾರೆ. ಇದರಿಂದ ಕೆರಳಿದ ಭೀಮರಾವ್ ಪಾಟೀಲ್ ಅದನ್ನ ಕೇಳಲು ನೀನ್ಯಾರು? ಎಂದು ಏಕವಚನದಲ್ಲೇ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Benefits | ಜೀರ್ಣಕ್ರಿಯೆಯಿಂದ ಚರ್ಮದ ಕಾಂತಿಯವರೆಗೆ: ಅನಾನಸ್ ಹಣ್ಣಿನಲ್ಲಿದೆ ಆರೋಗ್ಯದ ರಹಸ್ಯ!

ಬಳಿಕ ಇಬ್ಬರು ನಾಯಕರು ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿದ್ದು, ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದಾರೆ. ಇದರಿಂದ ಹುಮನಾಬಾದ್ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಮುಂಜಾಗ್ರತಾ ಕ್ರಮವಾಗಿ ಹುಮ್ನಾಬಾದ್​​ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ತಹಶೀಲ್ದಾರ್​​ ಅಂಜುಮ್ ತಬಸ್ಸುಮ ಆದೇಶಿಸಿದ್ದಾರೆ.

error: Content is protected !!