ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ವಿಧಾನಸಭೆಯ ಸ್ಪೀಕರ್ ಆಗಿ ಬಿಜೆಪಿ ಶಾಸಕ ರಾಹುಲ್ ನಾರ್ವೇಕರ್ ಸೋಮವಾರ (ಡಿ.09) ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಭಾನುವಾರ (ಡಿ.08) ರಾಹುಲ್ ನಾರ್ವೇಕರ್ ಸ್ಪೀಕರ್ ಹುದ್ದೆಗಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದರು. ಇನ್ನೂ ಮಹಾವಿಕಾಸ್ ಅಘಾಡಿಯೂ (MVC) ಯಾವುದೇ ಅಭ್ಯರ್ಥಿಯ ಹೆಸರನ್ನು ಘೋಷಣೆ ಮಾಡಿರಲಿಲ್ಲ. ಹೀಗಾಗಿ ಇಂದು ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು. ಈ ಮೂಲಕ 2ನೇ ಬಾರಿಗೆ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ.
1960ರಲ್ಲಿ ಮಹಾರಾಷ್ಟ್ರ ರಾಜ್ಯ ರಚನೆಯಾದ ಬಳಿಕ ಬಾಳಾಸಾಹೇಬ್ ಭರಡೆ ಅವರು ಎರಡು ಬಾರಿ ವಿಧಾನಸಭಾ ಸ್ಪೀಕರ್ ಆಗಿದ್ದ ಏಕೈಕ ಸದಸ್ಯರಾಗಿದ್ದರು. ಅದಾದ ಬಳಿಕ ರಾಹುಲ್ ನಾರ್ವೇಕರ್ ಎರಡನೇ ಬಾರಿ ಸ್ಪೀಕರ್ ಆಗಿ ಹೊರಹೊಮ್ಮಿದ್ದಾರೆ.