ಹೊಸದಿಗಂತ ಡಿಜಿಟಲ್ ಡೆಸ್ಕ್:
ವಸತಿ ಇಲಾಖೆಯಲ್ಲಿ ಹಣ ನೀಡಿದವರಿಗಷ್ಟೇ ಮನೆಗಳನ್ನು ಮಂಜೂರು ಮಾಡಲಾಗುತ್ತಿದೆ ಎಂಬ ರಾಜ್ಯ ನೀತಿ ಆಯೋಗದ ಉಪಾಧ್ಯಕ್ಷ ಬಿ.ಆರ್. ಪಾಟೀಲ್ ಅವರ ಆಡಿಯೋ ವಿಚಾರ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.ಇದರ ಬೆನ್ನಲ್ಲೇ ಮತ್ತೋರ್ವ ಕಾಂಗ್ರೆಸ್ ಶಾಸಕ ರಾಜು ಕಾಗೆ, ತಮ್ಮದೇ ಸರ್ಕಾರದ ವಿರುದ್ಧ ಸಿಡಿದೆದಿದ್ದು, ರಾಜೀನಾಮೆಯ ಬೆದರಿಕೆ ಹಾಕಿದ್ದಾರೆ.
ಕಾಗವಾಡ ತಾಲೂಕಿನ ಐನಾಪುರ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಾಗವಾಡ ಶಾಸಕ ರಾಜು ಕಾಗೆ, ನಮ್ಮ ಸರ್ಕಾರದಲ್ಲಿ ಯಾವುದೇ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಆಡಳಿತ ವ್ಯವಸ್ಥೆ ಸಂಪೂರ್ಣ ಹಾಳಾಗಿದೆ ಎಂದು ಟೀಕಿಸಿದರು. ಬಿ.ಆರ್.ಪಾಟೀಲ್ ಹೇಳಿದ್ದು ಸುಳ್ಳಲ್ಲ, ನಿಜಾನೆ ಇದೆ. ಅವರು ಹೇಳಿದ್ದ ಅಪ್ಪನ ಹಾಗಾಗಿದೆ ನನ್ನ ಪರಿಸ್ಥಿತಿ ಎಂದರು.
ಇದೀಗ ಈ ವಿಚಾರವಾಗಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಿಎಂ ಅನುದಾನ ಅಂತ ಬಜೆಟ್‌ನಲ್ಲಿ ಇಲ್ಲ, ನಾವು ಗ್ರ‍್ಯಾಂಟ್ ಕೊಡುವುದೆಲ್ಲಾ ವಿಶೇಷ ಅನುದಾನ ಅಂತಿರುತ್ತದೆ. ಅವರು ಹೇಳುತ್ತಾರೆ, ಶಾಸಕ ರಾಜು ಕಾಗೆಯನ್ನು ಕರೆದು ಮಾತನಾಡ್ತಿನಿ ಎಂದು ಹೇಳಿದರು.
ಸಿಎಂ ಸಿದ್ದರಾಮಯ್ಯ ಅನುದಾನದ ವರ್ಕ್ ಆರ್ಡರ್ ಸಿಗುತ್ತಿಲ್ಲ ಎಂದು ಎರಡು ದಿನದಲ್ಲಿ ರಾಜೀನಾಮೆ ನೀಡಿದ್ದರೂ ಅಚ್ಚರಿಯಿಲ್ಲ ಎಂದಿದ್ದಾರೆ. ಅವರು ಹೇಳುತ್ತಾರೆ, ಅವರಿಗೇನು? ಸಿಎಂ ಅನುದಾನ ಅಂತಾ ಇದೀಯಾ? ರಾಜು ಕಾಗೆಯನ್ನು ಕರೆದು ಮಾತಾಡುತ್ತೇನೆ ಎಂದರು.