ವಿಧಾನಸಭೆ ಉಪಸಭಾಧ್ಯಕ್ಷರಾಗಿ ಶಾಸಕ ರುದ್ರಪ್ಪ ಲಮಾಣಿ ಆಯ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ವಿಧಾನಸಭೆಯ ಉಪಸಭಾಧ್ಯಕ್ಷರಾಗಿ ಹಾವೇರಿಯ ಕಾಂಗ್ರೆಸ್‌ ಶಾಸಕ ರುದ್ರಪ್ಪ ಲಮಾಣಿ ಅವರು ಆಯ್ಕೆಯಾಗಿದ್ದಾರೆ.

ವಿಧಾನಸಭೆಯ ಉಪಸಭಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಿಗದಿಯಾಗಿತ್ತು. ಈ ಸ್ಥಾನಕ್ಕೆ ಹಾವೇರಿಯ ಶಾಸಕ ರುದ್ರಪ್ಪ ಲಮಾಣಿ ಅವರು ನಿನ್ನೆಯಷ್ಟೇ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದರು.

ರುದ್ರಪ್ಪ ಲಮಾಣಿ ಹಾವೇರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದು, ಉಪಸಭಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ವಿಪಕ್ಷ ಸದಸ್ಯರಿಗೆ ಹಸ್ತಲಾಘವ ನೀಡಿದರು. ಈ ವೇಳೆ ನಮ್ಮ ಜಿಲ್ಲೆಯವರು ನಮ್ಮ ಮಾತೇ ಕೇಳಬೇಕು ಎಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ‌ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!