ಅಂಕೋಲಾ ಸರ್ಕಾರಿ ಆಸ್ಪತ್ರೆಗೆ ನೂತನ ಡಯಾಲಿಸಿಸ್ ಯಂತ್ರ ಹಸ್ತಾಂತರಿಸಿದ ಶಾಸಕಿ ರೂಪಾಲಿ ನಾಯ್ಕ

ಹೊಸದಿಗಂತ ವರದಿ, ಅಂಕೋಲಾ:

ಶಾಸಕರ ನಿಧಿಯಿಂದ ಅಂಕೋಲಾ ಸರ್ಕಾರಿ ಆಸ್ಪತ್ರೆಗೆ ನೀಡಲಾಗಿರುವ ನೂತನ ಡಯಾಲಿಸಿಸ್ ಯಂತ್ರವನ್ನು ಕಾರವಾರ ಅಂಕೋಲಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ ಅವರು ಉದ್ಘಾಟಿಸಿ ರೋಗಿಗಳ ಸೇವೆಗೆ ಅರ್ಪಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಅಗತ್ಯ ವೈದ್ಯಕೀಯ ಸೌಲಭ್ಯಗಳಿಂದ ಕಾರವಾರ ಅಂಕೋಲಾ ಕ್ಷೇತ್ರದ ಜನತೆ ವಂಚಿತರಾಗಬಾರದು ಎಂಬ ಉದ್ದೇಶದಿಂದ ತಾಲೂಕು ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸುವ ಪ್ರಸ್ತಾವನೆಯನ್ನು ಆರೋಗ್ಯ ಸಚಿವರಿಗೆ ನೀಡಲಾಗಿದೆ ಎಂದರು.
ಅಂಕೋಲಾ ತಾಲೂಕು ಆಸ್ಪತ್ರೆಯ ಒಂದು ಡಯಾಲಿಸಿಸ್ ಯಂತ್ರ ಕೆಟ್ಟು ಹೋಗಿ ಕಿಡ್ನಿ ಸಮಸ್ಯೆ ಇರುವ ರೋಗಿಗಳಿಗೆ ಕಷ್ಟ ಆಗುತ್ತಿರುವುದನ್ನು ಮನಗಂಡು ಶಾಸಕರ ನಿಧಿಯಿಂದ ಅಂಕೋಲಾ ಆಸ್ಪತ್ರೆಗೆ ಮೂರು ಹೊಸ ಡಯಾಲಿಸಿಸ್ ಯಂತ್ರ ನೀಡುವ ಯೋಜನೆ ಹಾಕಿಕೊಳ್ಳಲಾಗಿದ್ದು ಅವುಗಳಲ್ಲಿ ಒಂದನ್ನು ಈಗ ನೀಡಲಾಗಿದೆ ಎಂದ ಅವರು
ಯಾವ ರೋಗಿಯೂ ಸೌಲಭ್ಯಗಳಿಂದ ವಂಚಿತರಾಗದಂತೆ ಯಂತ್ರದ ಸದುಪಯೋಗ ಮಾಡಿಕೊಳ್ಳುವಂತೆ ವೈದ್ಯರಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷೆ ಶಾಂತಲಾ ನಾಡಕರ್ಣಿ,ಉಪಾಧ್ಯಕ್ಷೆ ರೇಖಾ ಗಾಂವಕರ್, ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀಧರ ನಾಯ್ಕ, ತಾಲೂಕು ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಸಂತೋಷಕುಮಾರ ತಾಲೂಕು ವೈದ್ಯಾಧಿಕಾರಿ ಡಾ ನಿತಿನ್ ಹೊಸ್ಮೇಳಕರ, ಡಾ.ಈಶ್ವರಪ್ಪ, ಪೊಲೀಸ್ ನಿರೀಕ್ಷಕ ಸಂತೋಷ ಶೆಟ್ಟಿ
ಬಿಜೆಪಿ ಮಂಡಲ ಅಧ್ಯಕ್ಷ ಸಂಜಯ ನಾಯ್ಕ, ಪ್ರಮುಖರುಗಳಾದ ರಾಘವೇಂದ್ರ ಭಟ್ಟ, ನಿಲೇಶ ನಾಯ್ಕ, ಪ್ರವೀಣ ನಾಯ್ಕ
ಮೊದಲಾದವರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!