ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರವಾಹ ಪೀಡಿತ ಪ್ರದೇಶಗಳ ಪುನರ್ವಸತಿ ಕೇಂದ್ರಗಳಿಗೆ ಮಾಜಿ ಉಪಮುಖ್ಯಮಂತ್ರಿ ಹಾಗೂ ಅಥಣಿ ಶಾಸಕ ಲಕ್ಷ್ಮಣ ಸವದಿ ಭಾನುವಾರ ಭೇಟಿ ನೀಡಿ, ಸಂಭವನೀಯ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಕೈಗೊಂಡಿರುವ ಸಿದ್ಧತೆಗಳನ್ನು ಪರಿಶೀಲಿಸಿದರು.
ಇದೇ ವೇಳೆ ಸಚಿವರು ಪುನರ್ವಸತಿ ಕೇಂದ್ರಗಳಿಗೆ ಸ್ಥಳಾಂತರಗೊಂಡಿರುವ ಜನರಿಗೆ ಹೊದಿಕೆಗಳು ಮತ್ತು ಅಗತ್ಯ ಸಾಮಗ್ರಿಗಳನ್ನು ಒಳಗೊಂಡ ಉಚಿತ ಕಿಟ್‌ಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದವರಿಗೆ ಸರ್ಕಾರ ಎಲ್ಲ ರೀತಿಯ ನೆರವು ನೀಡಲಿದೆ ಎಂದು ಭರವಸೆ ನೀಡಿದರು. ಬಳಿಕ ಪ್ರವಾಹ ಪರಿಹಾರಕ್ಕೆ ಯಾವುದೇ ಸಹಾಯ ಬೇಕಾದರೆ ಕೇಳಲು ಹಿಂಜರಿಯದಿರಿ ಎಂದು ಜನರನ್ನು ಕೋರಿದರು. ಅಲ್ಲದೆ, ಈ ಬಗ್ಗೆ ವೈಯಕ್ತಿಕವಾಗಿ ಪರಿಶೀಲಿಸುವುದಾಗಿ ಹಾಗೂ ತಮ್ಮ ವೈಯಕ್ತಿಕ ಸೆಲ್ ಫೋನ್ ನಂಬರ್ ಗೆ ಕರೆ ಮಾಡಿ ಸಂಪರ್ಕಿಸುವಂತೆ ಜನರಿಗೆ ತಿಳಿಸಿದರು.
ಪ್ರವಾಹ ಪರಿಸ್ಥಿತಿ ನಿಭಾಯಿಸಲು ತಾಲೂಕು ಆಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ರಕ್ಷಣಾ ಕಾರ್ಯಾಚರಣೆಗೆ ಕೆಲವು ದೋಣಿಗಳು ಅಗತ್ಯವಿದ್ದಲ್ಲಿ ಅವುಗಳನ್ನು ಶೀಘ್ರದಲ್ಲೇ ಒದಗಿಸಲಾಗುವುದು ಎಂದು ಹೇಳಿದರು.