ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ವಿಧಾನಸಭೆಯಲ್ಲಿ ಶಾಸಕರೊಬ್ಬರು ವಿಧಾನಸೌಧದ ಸಭಾಂಗಣದಲ್ಲಿ ಪಾನ್ ಮಸಾಲಾ ಅಗಿದು ಉಗಿದಿದ್ದಾರೆ. ಈ ಗಲೀಜನ್ನು ಸ್ಪೀಕರ್ ಕ್ಲೀನ್ ಮಾಡಿ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.
ಸ್ಪೀಕರ್ ಸತೀಶ್ ಮಹಾನಾ ಅವರು, ಕೆಲ ಸದಸ್ಯರು ಪಾನ್ ಮಸಾಲ ಸೇವಿಸಿದ ಬಳಿಕ ವಿಧಾನಸಭೆಯ ಸಭಾಂಗಣದಲ್ಲೇ ಉಗುಳಿರುವ ವಿಚಾರವನ್ನು ಪ್ರಸ್ತಾಪಿಸಿದರು. ಅಲ್ಲದೇ ಉಗುಳಿದ ಕಲೆಗಳನ್ನು ತಾವೇ ಸ್ವಚ್ಛಗೊಳಿಸಿರುವುದಾಗಿಯೂ ಹೇಳಿದರು.
ಕಲಾಪ ಆರಂಭಕ್ಕೂ ಮುನ್ನವೇ ಮಾತನಾಡಿದ ಸ್ಪೀಕರ್, ಇಂದು ಬೆಳಗ್ಗೆ ಮಾನ್ಯ ಸದಸ್ಯರೊಬ್ಬರು ನಮ್ಮ ವಿಧಾನಸೌಧದ ಈ ಸಭಾಂಗಣದಲ್ಲಿ ಪಾನ್ ಮಸಾಲ ಸೇವಿಸಿದ ನಂತರ ಉಗುಳಿದ್ದಾರೆ ಎಂಬ ಮಾಹಿತಿ ಬಂತು. ಹಾಗಾಗಿ ನಾನಿಲ್ಲಿಗೆ ಬಂದು ಅದನ್ನು ಸ್ವಚ್ಛಗೊಳಿಸಿದೆ ಎಂದು ತಿಳಿಸಿದರು.
ನಾನು ಉಗುಳಿದ ಶಾಸಕರನ್ನು ವಿಡಿಯೋನಲ್ಲಿ ನೋಡಿದ್ದೇನೆ. ಆದ್ರೆ ಯಾರನ್ನೂ ಅವಮಾನಿಸಲು ಬಯಸುವುದಿಲ್ಲ, ಹಾಗಾಗಿ ನಾನು ಅವರ ಹೆಸರನ್ನೂ ಪ್ರಸ್ತಾಪಿಸುವುದಿಲ್ಲ. ಇನ್ಮುಂದೆ ಯಾರಾದ್ರೂ ಈ ರೀತಿ ಮಾಡುವುದು ಕಂಡರೆ ಅದನ್ನು ತಡೆಯಬೇಕು ಅಂತ ನಾನು ಎಲ್ಲಾ ಸದರಿಗೆ ಇತ್ತಾಯಿಸುತ್ತೇನೆ. ಈ ಸಭೆಯಲ್ಲಿ ಸ್ವಚ್ಛವಾಗಿಡುವುದು ನಮ್ಮ ಜವಾಬ್ದಾರಿ. ತಪ್ಪು ಮಾಡಿ ಪ್ರಶ್ನೆಯಲ್ಲಿರುವ ಶಾಸಕರು ಅವರಾಗಿಯೇ ಈ ತಪ್ಪು ಮಾಡಿದ್ದಾರೆಂದು ಹೇಳಿದ್ರೆ ಒಳ್ಳೆಯದು, ಇಲ್ಲದಿದ್ದರೆ ನಾನೇ ಅವರನ್ನು ಕರೆಯುತ್ತೇನೆ ಎಂದು ಎಚ್ಚರಿಕೆ ನೀಡಿದರು.