ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ತವ್ಯದಲ್ಲಿದ್ದ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಮಾಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಬಿ.ಎಸ್. ಸುರೇಶ್‌ಗೌಡ ಅವರ ಪುತ್ರಿ ಐಶ್ವರ್ಯಾ ಅವರಿಗೆ ಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ.
ಶ್ರೀರಂಗಪಟ್ಟಣದ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.
ಏನಿದು ಪ್ರಕರಣ
ಆಗಸ್ಟ್ 12ರಂದು ಅರತಿ ಉಕ್ಕಡದ ಮಾರಮ್ಮ ದೇವಾಲಯದಲ್ಲಿ ಭಕ್ತರ ದಟ್ಟಣೆ ನಿಯಂತ್ರಿಸುವ ವೇಳೆ ಪಿಎಸ್‌ಐ ಸವಿತಾ ಪಾಟೀಲ್ ಹಾಗೂ ಐಶ್ವರ್ಯಾ ನಡುವೆ ವಾಗ್ವಾದ ನಡೆದಿತ್ತು. ಈ ವೇಳೆ ಐಶ್ವರ್ಯಾ ಅವರು ಪಿಎಸ್‌ಐಗೆ ಕಪಾಳಮೋಕ್ಷ ಮಾಡಿದ್ದಾರೆ ಎನ್ನಲಾಗಿದ್ದು, ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.
ಇದನ್ನೂ ಓದಿ:
ಸವಿತಾ ಪಾಟೀಲ್ ನೀಡಿದ ದೂರಿನ ಆಧಾರದ ಮೇಲೆ ಐಶ್ವರ್ಯಾ ವಿರುದ್ಧ ಪ್ರಕರಣ ದಾಖಲಾಗಿದ್ದು, ಸರ್ಕಾರಿ ನೌಕರನ ಕರ್ತವ್ಯಕ್ಕೆ ಅಡ್ಡಿಪಡಿಸುವುದು ಸೇರಿದಂತೆ ವಿವಿಧ BNS ಸೆಕ್ಷನ್‌ಗಳಡಿ ಆರೋಪ ಹೊರಿಸಲಾಗಿದೆ. ಐಶ್ವರ್ಯಾ ಕೂಡ ಪಿಎಸ್‌ಐ ವಿರುದ್ಧ ಪ್ರತಿದೂರು ನೀಡಿದ್ದಾರೆ. ಎರಡೂ ದೂರುಗಳ ಕುರಿತು ತನಿಖೆ ಮುಂದುವರಿದಿದೆ.



