ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು

ಹೊಸ ದಿಗಂತ ಡಿಜಿಟಲ್ ಡೆಸ್ಕ್:
 
ಶಾಸಕ ಮುನಿರತ್ನ ಅವರ ಮೇಲೆ ಮೊಟ್ಟೆ ಎಸೆತ ಪ್ರಕರಣದ ಮೂವರು ಆರೋಪಿಗಳಿಗೆ ಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಪ್ರಕರಣದ ಆರೋಪಿಗಳಾದ ಚಂದ್ರು, ವಿಶ್ವನಾಥ, ಕೃಷ್ಣಮೂರ್ತಿಗೆ ಗುರುವಾರ 32ನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಏನಿದು ಪ್ರಕರಣ?
ಲಗ್ಗೆರೆ ವಾರ್ಡ್‌ನಲ್ಲಿರುವ ಲಕ್ಷ್ಮಿದೇವಿ ನಗರದಲ್ಲಿ ವಾಜಪೇಯಿ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮರಳಿ ಕಾರಿನತ್ತ ನಡೆದುಕೊಂಡು ಹೋಗುತ್ತಿದ್ದಾಗ ಮೊಟ್ಟೆ ದಾಳಿ ನಡೆದಿತ್ತು. ಕೂಡಲೇ ದಾಳಿಕೋರರನ್ನ ಮುನಿರತ್ನ ಬೆಂಬಲಿಗರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಈ ಸಂಬಂಧ ಕೇಸ್‌ ದಾಖಲಿಸಿಕೊಂಡಿದ್ದ ನಂದಿನಿ ಲೇಔಟ್‌ ಪೊಲೀಸರು ಮೂವರು ಆರೋಪಿಗಳನ್ನ ಬಂಧಿಸಿದ್ದರು. ಇಂದು ಮೂವರು ಆರೋಪಿಗಳನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು.

ಮುನಿರತ್ನ ಡಿಸ್ಚಾರ್ಜ್‌ 
ಮೊಟ್ಟೆ ದಾಳಿ ಬಳಿಕ ನಗರದ ಕೆ.ಸಿ ಜನರಲ್‌ ಆಸ್ಪತ್ರೆಗೆ ದಾಖಲಾಗಿದ್ದ ಶಾಸಕ ಮುನಿರತ್ನ, ವೈದ್ಯರ ಸೂಚನೆ ಮೇರೆಗೆ ಬುಧವಾರ ರಾತ್ರಿ ಆಸ್ಪತ್ರೆಯಲ್ಲೇ ಉಳಿದಿದ್ದರು. ಗುರುವಾರ (ಇಂದು) ಡಿಸ್ಚಾರ್ಜ್‌ ಆಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here