ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಂಎಲ್ಎ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂ. ಪಡೆದು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ್ತಿ ಚೈತ್ರಾ ಕುಂದಾಪುರ, ಶ್ರೀಕಾಂತ್, ರಮೇಶ್, ಗಗನ್, ಪ್ರಜ್ವಲ್ ಹಾಗೂ ಧನರಾಜ್‌ನನ್ನು ಸೆಪ್ಟೆಂಬರ್ 23ರವರೆಗೆ ಸಿಸಿಬಿ ಕಸ್ಟಡಿಗೆ ನೀಡಿ ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ.
ವಂಚನೆ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಹಾಗೂ ಶ್ರೀಕಾಂತ್, ರಮೇಶ್, ಗಗನ್, ಪ್ರಜ್ವಲ್, ಧನರಾಜ್ ನನ್ನು ಬಂಧಿಸಿದ್ದ ಬೆಂಗಳೂರು ಸಿಸಿಬಿ ಪೊಲೀಸರು, ಆರೋಪಿಗಳನ್ನು ಕೋರ್ಟ್ ಗೆ ಹಾಜರು ಪಡಿಸಿದ್ದು, ಹೆಚ್ಚಿನ ವಿಚಾರಣೆಗಾಗಿ 14 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ನ್ಯಾಯಾಧೀಶರ ಬಳಿ ಮನವಿ ಮಾಡಿದರು.ಪೊಲೀಸರ ಮನವಿ ಆಲಿಸಿದ ನ್ಯಾಯಾಧೀಶರು ಸೆ.23ರವರೆಗೆ ಆರೋಪಿಗಳನ್ನು ಸಿಸಿಬಿ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.