ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಅಕ್ರಮ ಆನ್‌ಲೈನ್ ಹಾಗೂ ಆಫ್‌ಲೈನ್ ಬೆಟ್ಟಿಂಗ್ ಪ್ರಕರಣದಡಿ ಬಂಧನೊಕ್ಕಳಗಾಗಿರುವ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು ಶೋಧ ನಡೆಸಿದ್ದಾರೆ.
ಚಳ್ಳಕೆರೆಯ ಫೆಡರಲ್ ಬ್ಯಾಂಕ್‌ನಲ್ಲಿ ಇಡಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಅಲ್ಲದೇ ಚಳ್ಳಕೆರೆ ಪಟ್ಟಣದ ಹಲವೆಡೆ ಇಡಿ ಅಧಿಕಾರಿಗಳು ಶೋಧ ನಡೆಸಿದ್ದಾರೆ.
ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ಅಲ್ಪಾವಧಿಯಲ್ಲಿಯೇ 2,000 ಕೋಟಿ ರೂ. ಲಾಭಗಳಿಸಿದ್ದಾರೆ ಎಂಬುದು ಇಡಿ (ED) ದಾಳಿ ವೇಳೆ ಬಯಲಾಗಿತ್ತು.
ಆಗಸ್ಟ್ 29ರಂದು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು ಅಕ್ರಮ ಆನ್‌ಲೈನ್ ಹಾಗೂ ಆಫ್‌ಲೈನ್ ಬೆಟ್ಟಿಂಗ್ ಪ್ರಕರಣದಡಿ ಶಾಸಕ ವೀರೇಂದ್ರ ಪಪ್ಪಿಯನ್ನು ಸಿಕ್ಕಿಂನಿಂದ ಕರೆತಂದು ಬಂಧಿಸಿದ್ದರು.