ಮಾದಕ ವಸ್ತು ಹಾವಳಿ ನಿಯಂತ್ರಣಕ್ಕೆ ವಿಶೇಷ ಪಡೆ ರಚಿಸಲು ಸಿಎಂಗೆ ಶಾಸಕ ಯಶಪಾಲ್ ಮನವಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಉಡುಪಿ ಜಿಲ್ಲೆಯಲ್ಲಿ ಮಾದಕ ವಸ್ತು ನಿಯಂತ್ರಣಕ್ಕೆ ಪ್ರತ್ಯೇಕ ಸ್ಕ್ವಾಡ್ ರಚನೆಗೆ ಹಾಗೂ ಜಿಲ್ಲೆಯ ಅಭಿವೃದ್ಧಿಗೆ 50 ಕೋಟಿ ರೂ.ಗಳ ವಿಶೇಷ ಅನುದಾನ ನೀಡುವಂತೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಶಾಸಕ ಯಶ್ ಪಾಲ್ ಸುವರ್ಣ , ಈ ವೇಳೆ ಉಡುಪಿ ಜಿಲ್ಲೆಯಲ್ಲಿ ನಡೆಯುತ್ತಿರುವ ಡ್ರಗ್ಸ್ ಮಾಫಿಯಾ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಯಲ್ಲಿ ಪ್ರತ್ಯೇಕ ದಳ ರಚಿಸುವಂತೆ ಮನವಿ ಮಾಡಿದರು.

ಕಡಲಕೊರೆತ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ಮಂಜೂರು ಮಾಡಿದರೆ ಅನುಕೂಲವಾಗುವ ದೃಷ್ಟಿಯಿಂದ ಉಡುಪಿ ಕ್ಷೇತ್ರದ ಹಾಸ್ಟೆಲ್ ಕಟ್ಟಡ ಮತ್ತು ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಸೇರಿದಂತೆ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಗೆ 50 ಕೋಟಿ ವಿಶೇಷ ಅನುದಾನ ನೀಡುವಂತೆ ಯಶ್ ಪಾಲ್ ಸುವರ್ಣ ಮನವಿ ಮಾಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here