April 21, 2026
Tuesday, April 21, 2026
spot_img

ಐಪಿಎಲ್ ಗುಂಗಿನಲ್ಲಿ ಶಾಸಕರು: ಟಿಕೆಟ್‌ಗಾಗಿ ಸ್ಪೀಕರ್ ಕಚೇರಿ ಮುಂದೆ ಸಾಲುಗಟ್ಟಿ ನಿಂತ ಪಿಎಗಳು!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಜನತೆ ಈಗಾಗಲೇ ವಿವಿಧ ಸಮಸ್ಯೆಗಳಿಂದ ಪರದಾಡುತ್ತಿದ್ದು, ಇದನ್ನು ಕೇಳಿ ಪರಿಹಾರ ನೀಡಬೇಕಿದ್ದ ಜನಪ್ರತಿನಿಧಿಗಳು ಮಾತ್ರ ಐಪಿಎಲ್ ಗುಂಗಿನಲ್ಲಿ ಮುಳುಗಿದ್ದು, ನಾಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್​​ ಚಾಲೆಂಜರ್ಸ್​​ ಬೆಂಗಳೂರು ಮತ್ತು ಚೆನ್ನೈ ಸೂಪರ್​​ ಕಿಂಗ್ಸ್​ ನಡುವಿನ ಪಂದ್ಯದ ಟಿಕೆಟ್ ಪಡೆಯಲು ಸ್ಪೀಕರ್ ಕಚೇರಿ ಮುಂದೆ ಸಾಲುಗಟ್ಟಿ ನಿಂತಿದ್ದಾರೆ.

ರಾಜ್ಯದ ಎಲ್ಲಾ ಶಾಸಕರಿಗೆ ಮೂರು ಐಪಿಎಲ್ ಟಿಕೆಟ್ ಉಚಿತವಾಗಿ ನೀಡಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಒಪ್ಪಿಗೆ ನೀಡಿದ್ದು, ಇದರ ಬೆನ್ನಲ್ಲೇ ನಾಳೆ ಬೆಂಗಳೂರಿನಲ್ಲಿ ಮ್ಯಾಚ್ ನಡೆಯಲಿದ್ದು, ಹೀಗಾಗಿ ಶಾಸಕರ ಪಿಎಗಳು ಸ್ಪೀಕರ್ ಕಚೇರಿ ಮುಂದೆ ಕ್ಯೂ ನಿಂತು ಟಿಕೆಟ್ ಪಡೆದಿದ್ದಾರೆ.

ಪ್ರಸ್ತುತ ಬೆಂಗಳೂರು ಸಹಿತ ವಿವಿಧ ಭಾಗದಲ್ಲಿ ಆಟೋ ಚಾಲಕರು ಗ್ಯಾಸ್‌ಗಾಗಿ ಗೋಳಾಡುತ್ತಿದ್ದು, ಜೊತೆಗೆ ಆರ್ಥಿಕ ಸಮಸ್ಯೆಗಳಿಂದ ಸಾಮಾನ್ಯ ಜನರ ಜೀವನ ಅಸ್ತವ್ಯಸ್ತವಾಗಿದೆ. ಇವುಗಳ ಕುರಿತು ಗಮನಹರಿಸಬೇಕಾದ ಜನಪ್ರತಿನಿಧಿಗಳು ಈ ಪರಿಸ್ಥಿತಿಯಲ್ಲಿ ಐಪಿಎಲ್ ಟಿಕೆಟ್ ಹಿಂದೆ ಬಿದ್ದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !