ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ MLC ಗೋವಿಂದರಾಜ್, ನಜೀರ್ ಅಹ್ಮದ್, ಕಾನೂನು ಸಲಹೆಗಾರರಾಗಿ ಎ.ಎಸ್ ಪೊನ್ನಣ್ಣ ನೇಮಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ, ರಾಜಕೀಯ ಕಾರ್ಯದರ್ಶಿಯಾಗಿ MLC ಗೋವಿಂದರಾಜ್, ನಜೀರ್ ಅಹ್ಮದ್, ಕಾನೂನು ಸಲಹೆಗಾರರಾಗಿ ಎ.ಎಸ್ ಪೊನ್ನಣ್ಣ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಎಂ ಸಿದ್ಧರಾಮಯ್ಯ ಟಿಪ್ಪಣಿ ಹೊರಡಿಸಿದ್ದಾರೆ.

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದಂತ ಎಎಸ್ ಪೊನ್ನಣ್ಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನನ್ನ ಕಾನೂನು ಸಲಹೆಗಾರರನ್ನಾಗಿ ನೇಮಿಸಿ ಸಂಪುಟ ದರ್ಜೆಯ ಸಚಿವ ಸ್ಥಾನಮಾನದೊಂದಿಗೆ, ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ಆದೇಶದಲ್ಲಿ ಸೂಚಿಸಿದ್ದಾರೆ.

ಅದೇ ರೀತಿ ವಿಧಾನಪರಿಷತ್ ಸದಸ್ಯ ಕೆ.ಗೋವಿಂದರಾಜ್ ಮತ್ತು ನಜೀರ್ ಅಹ್ಮದ್ ಅವರನ್ನು ರಾಜ್ಯ ಸರ್ಕಾರವು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯನ್ನಾಗಿ ಇಂದು ಆದೇಶ ಹೊರಡಿಸಿದೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!