ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಲಬುರಗಿ ಸರ್ಕಾರಿ ಅಧಿಕಾರಿಗಳನ್ನು ನಿಂದಿಸಿದ ಪ್ರಕರಣದಲ್ಲಿ ಬಂಧನದ ಭೀತಿಯಲ್ಲಿದ್ದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಗೆ ಕೋರ್ಟ್ ಕೊಂಚ ರಿಲೀಫ್ ನೀಡಿದೆ.
ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಕೋರಿ ರವಿಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಅರ್ಜಿದಾರರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸೂಚನೆ ನೀಡಿದೆ. ಅಲ್ಲದೇ ವಿಚಾರಣೆಗೆ ಸಹಕರಿಸುವಂತೆ ರವಿಕುಮಾರ್ ಅವರಿಗೂ ಸಹ ಕೋರ್ಟ್ ಸೂಚಿಸಿದೆ.
ಮೇ 24 ರಂದು ಬಿಜೆಪಿಯ ʻಕಲಬುರಗಿ ಚಲೋʼ ಪ್ರತಿಭಟನಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡುವ ವೇಳೆ ರವಿಕುಮಾರ್, ಡಿಸಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಕಲಬುರಗಿಯ ಸ್ಟೇಷನ್ ಬಜಾರ್ ಠಾಣೆಗೆ ದೂರು ನೀಡಲಾಗಿತ್ತು.