ಮಾಜಿ ಸಿಎಂ ನಿವಾಸದ ಬಳಿ ದುಷ್ಕರ್ಮಿಗಳ ಅಟ್ಟಹಾಸ: ಅರ್ಚಕರ ಮೇಲೆ ಹಲ್ಲೆ, ವಾಹನ ಧ್ವಂಸ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಂಗಳವಾರ ತಡರಾತ್ರಿ ತ್ರಿಪುರಾದ ಗೋಮತಿ ಜಿಲ್ಲೆಯ ಉದಯಪುರದಲ್ಲಿ ತ್ರಿಪುರಾ ಮಾಜಿ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಅವರ ಪೂರ್ವಜರ ಮನೆಯ ಹೊರಗೆ ಅಪರಿಚಿತರು ಅರ್ಚಕರ ಮೇಲೆ ಹಲ್ಲೆ ನಡೆಸಿದ್ದಾರೆ. ಉದಯಪುರದ ಜಮ್ಜುರಿ ಪ್ರದೇಶದ ರಾಜನಗರದಲ್ಲಿರುವ ದೇಬ್ ಅವರ ನಿವಾಸಕ್ಕೆ ಪುರೋಹಿತರ ಗುಂಪು ಆಗಮಿಸಿದ ಸಮಯದಲ್ಲಿ ಈ ಘಟನೆ ಸಂಭವಿಸಿದೆ. ಇಂದು ಬುಧವಾರ ದೇಬ್ ಅವರ ತಂದೆಯ ವಾರ್ಷಿಕ ಶ್ರಾದ್ಧ ಸಮಾರಂಭದಲ್ಲಿ ಯಜ್ಞ ಮಾಡಲು ಅರ್ಚಕರು ಬಂದಿದ್ದರು. ಈ ಸಮಯದಲ್ಲಿ ದುಷ್ಕರ್ಮಿಗಳ ಗುಂಪೊಂದು ಅಟ್ಟಹಾಸ ಮೆರೆದಿದೆ.

ದುಷ್ಕರ್ಮಿಗಳು ಪುರೋಹಿತರ ಮೇಲೆ ದಾಳಿ ಮಾಡಿ ಅವರ ವಾಹನಗಳನ್ನು ಧ್ವಂಸಗೊಳಿಸಿದ್ದಾರೆ. ಪಕ್ಕದಲ್ಲಿದ್ದವರು ಮತ್ತು ಸ್ಥಳೀಯರು ಅರ್ಚಕರನ್ನು ರಕ್ಷಿಸಲು ಮುಂದಾದಾಗ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಘಟನೆ ಖಂಡಿಸಿ ಸ್ಥಳೀಯರು ಪ್ರತಿಭಟನೆ ಆರಂಭಿಸಿದ್ದಾರೆ. ಈ ನಡುವೆ ಪ್ರತಿಭಟನಾಕಾರರು ದಾಳಿಕೋರರೆಂದು ಅಂದಾಜಿಸಿ ಕೆಲವು ಅಂಗಡಿಗಳನ್ನು ಧ್ವಂಸಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಉಪವಿಭಾಗದ ಪೊಲೀಸ್ ಅಧಿಕಾರಿ ನಿರುಪಮ್ ದೆಬ್ಬರ್ಮಾ ಮತ್ತು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದೇಬಂಜನಾ ರಾಯ್ ಅವರು ಪರಿಸ್ಥಿತಿಯನ್ನು ನಿಭಾಯಿಸಲು ಸ್ಥಳಕ್ಕೆ ಧಾವಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!