ಕಸ್ಟಡಿಯಲ್ಲಿ ಮೀನು ವ್ಯಾಪಾರಿ ಸಾವು: ಪೊಲೀಸ್‌ ಠಾಣೆಗೆ ಬೆಂಕಿ ಹಚ್ಚಿದ ಉದ್ರಿಕ್ತ ಜನರ ಗುಂಪು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಸ್ಥಳೀಯ ನಿವಾಸಿಯೊಬ್ಬರು ಕಸ್ಟಡಿಯಲ್ಲಿ ಸಾವನ್ನಪ್ಪಿದ ಘಟನೆಯಿಂದ ಆಕ್ರೋಶಗೊಂಡ ಉದ್ರಿಕ್ತ ಜನಸಮೂಹ ಪೊಲೀಸ್‌ ಠಾಣೆಗೆ ಬೆಂಕಿ ಹಚ್ಚಿದ ಘಟನೆ ಅಸ್ಸಾಂನ ನಾಗಾಂವ್ ಜಿಲ್ಲೆಯ ಅಸ್ಸಾಂನ ನಾಗಾಂವ್ ಜಿಲ್ಲೆಯ ಬ್ಯಾಟದ್ರಾವ ಎಂಬಲ್ಲಿ ನಡೆದಿದೆ.
ಬೆಂಕಿ ಹಚ್ಚಿದವರಲ್ಲಿ ಮೂವರನ್ನು ಬಂಧಿಸಲಾಗಿದ್ದು, ಇತರರನ್ನು ಸೆರೆಹಿಡಿಯಲು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶುಕ್ರವಾರ ಸಂಜೆ ಶಿವಸಾಗರಕ್ಕೆ ಬಸ್‌ನಲ್ಲಿ ಹೋಗುತ್ತಿದ್ದ ಸಲೋನಬೋರಿ ಗ್ರಾಮದ ಮೀನು ವ್ಯಾಪಾರಿಯೊಬ್ಬನನ್ನು ಪೊಲೀಸರು ಬಂಧಿಸಿದ್ದರು. ಆ ಬಳಿಕ ಆತ ಪೊಲೀಸ್‌ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದ. ಇದರಿಂದ ಕ್ರೋಧಗೊಂಡ ಜನರ ಗುಂಪು ಬ್ಯಾಟದ್ರಾವ ಪೊಲೀಸ್ ಠಾಣೆ ಮತ್ತು ಹಲವಾರು ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚಿದೆ. ವ್ಯಾಪಾರಿಯನ್ನು ಯಾವ ಕಾರಣಕ್ಕಾಗಿ ಬಂಧಿಸಲಾಗಿತ್ತು ಎಂಬುದು ಸ್ಪಷ್ಟವಾಗಿಲ್ಲ.
ಪೊಲೀಸರು 10,000 ರೂ ಹಣ ಹಾಗೂ ಬಾತುಕೋಳಿಗಳನ್ನು ಲಂಚವಾಗಿ ಕೇಳಿದ್ದರು ಎಂದು ಮೀನು ವ್ಯಾಪಾರಿಯ ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ವ್ಯಾಪಾರಿ ಬಿಡುಗಡೆಗಾಗಿ ಆತನ ಹೆಂಡತಿ ಬೆಳಿಗ್ಗೆ ಹಣ, ಬಾತುಕೋಳಿಗಳೊಂದಿಗೆ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಳು. ಆ ವೇಳೆ ವ್ಯಕ್ತಿಯನ್ನು ನಾಗಾವ್ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಯಿತು. ಆದರೆ ಅಲ್ಲಿಗೆ ತಲುಪಿದಾಗ ಆತ ಸತ್ತಿರುವುದು ತಿಳಿದುಬಂತು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಪೊಲೀಸರ ಚಿತ್ರಹಿಂಸೆಯಿಂದ ವ್ಯಕ್ತಿ ಸಾವನ್ನಪ್ಪಿದ್ದಾನೆ ಸ್ಥಳೀಯರು ಆರೋಪಿಸಿದ್ದಾರೆ.
ಘಟನೆಯ ನಂತರ ಸ್ಥಳಕ್ಕೆ ಭೇಟಿ ನೀಡಿದ ಎಸ್ಪಿ, ಪೊಲೀಸರು ಲಭ್ಯವಿರುವ ಎಲ್ಲಾ ವಿಡಿಯೋ ದೃಶ್ಯಾವಳಿಗಳನ್ನು ವಿಶ್ಲೇಷಿಸುತ್ತಿದ್ದಾರೆ. ವ್ಯಕ್ತಿಯನ್ನು ಬಿಡುಗಡೆ ಮಾಡಲು ಪೊಲೀಸರು ಲಂಚ ಕೇಳಿದ್ದಾರೆ ಎಂಬ ಆರೋಪದ ಬಗ್ಗೆ ತನಿಖೆ ನಡೆಸಲಾಗುವುದು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ನಾಂಗಾಲ್‌ ಎಸ್ಪಿ ಲೀನಾ ಡೋಲಿ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!